ಕುಶಾಲನಗರ: ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಕಾಡು ಮೀಸಲು ಅರಣ್ಯ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರು.

ಸುಳ್ಯದ ಪೆರಾಜೆಯ ನಿವಾಸಿ ಇನ್ಫೋಸಿಸ್ ಉದ್ಯೋಗಿ ಎ. ಕಾರ್ತಿಕ್ ಭಟ್ (30) ಮೃತರು.

ಮಡಿಕೇರಿಯಿಂದ ಕುಶಾಲನಗರಕ್ಕೆ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬಿದ್ದು ಗಂಭೀರವಾಗಿ ಗಾಯಗೊಂಂಡು ಸ್ಥಳದಲ್ಲೇ ಮೃತಪಟ್ಟರು. ಕಾರು ರಸ್ತೆ ಪಕ್ಕದ ಕಾಡಿನೊಳಗೆ ನುಗ್ಗಿತು. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

ಕಾರು ಚಾಲಕ ಮಾದಾಪುರ ನಿವಾಸಿ ಬೋಪಣ್ಣ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಸಂಚಾರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.