ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ | ವೈದ್ಯರ ನೇಮಿಸುವಂತೆ ಆಗ್ರಹಿಸಿ ಪ್ರತಿಭಟನೆ

Published 10 ಜೂನ್ 2024, 16:30 IST
Last Updated 10 ಜೂನ್ 2024, 16:30 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಪಕ್ಷದ ಮುಖಂಡ ಎಸ್.ಜಿ. ಮೇದಪ್ಪ ಮಾತನಾಡಿ, ಆಸ್ಪತ್ರೆಯಲ್ಲಿ ಹಲವು ಸಮಯದಿಂದ ವೈದ್ಯರಿಲ್ಲದೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಇರುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳನ್ನು ಮಡಿಕೇರಿ, ಮೈಸೂರು ಹಾಗೂ ಮಂಗಳೂರಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆ ಆಗಿದೆ’ ಖಂಡನೀಯ ಎಂದರು.

ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಮಾತನಾಡಿದರು. ನಂತರ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಗೆ ತೆರಳಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.

ಕಚೇರಿ ಮುಂದೆ ಅರ್ಧಗಂಟೆ ಕಾದ ಪ್ರತಿಭಟನಾಕಾರರು ಅಕ್ರೋಶಗೊಂಡು ತಹಶೀಲ್ದಾರ್ ಕೊಠಡಿಗೆ ನುಗ್ಗುವ ಪ್ರಯತ್ನ ಮಾಡಿದರು. ಪೊಲೀಸರು ತಡೆಯೊಡ್ಡಿದ ಹಿನ್ನೆಲೆ ಕೊಠಡಿ ಬಾಗಿಲಿನ ಸನಿಹ ಧರಣಿ ಮಾಡಿ ಧಿಕ್ಕಾರ ಕೂಗಿದರು.

ನಂತರ ತಹಶೀಲ್ದಾರ್ ಪ್ರತಿಭಟನಾ ಸ್ಥಳಕ್ಕೆ ತೆರಳಿ, ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಹಾಗೂ ರೈತರೊಂದಿಗೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಿದ್ದರಿಂದ ಸ್ವಲ್ಪ ತಡವಾಯಿತು ಎಂದು ಪ್ರತಿಭಟನಾಕಾರರಿಗೆ ಸಮಜಾಯಿಸಿ ನೀಡಿ ಮನವಿ ಪತ್ರ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT