ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯರ ಪೌರತ್ವ ಕಸಿದುಕೊಳ್ಳಲ್ಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ

ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿಯಿಂದ ಜನಜಾಗೃತಿ
Last Updated 17 ಜನವರಿ 2020, 14:23 IST
ಅಕ್ಷರ ಗಾತ್ರ

ಮಡಿಕೇರಿ: ‘ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸುತ್ತಿರುವುದು ದೇಶದ ಹಿತದೃಷ್ಟಿಯಿಂದಉತ್ತಮ ಬೆಳವಣಿಗೆಯಲ್ಲ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ ಹೇಳಿದರು.

ನಗರದ ಗಾಂಧಿ ಮೈದಾನದಲ್ಲಿ ಶುಕ್ರವಾರ ಪೌರತ್ವ ಕಾಯ್ದೆ ಬೆಂಬಲಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಲೋಕಸಭೆ, ರಾಜ್ಯಸಭೆಗಳಿಗೆತನ್ನದೇ ಆದ ಗೌರವವಿದೆ. ಭಾರತೀಯತೆಯನ್ನು ಗಮನದಲ್ಲಿಟ್ಟುಕೊಂಡುಕಾಯ್ದೆ ರೂಪಿಸಲಾಗುತ್ತದೆ. ಆದರೆ, ಈ ಕಾಯ್ದೆ ಬಗ್ಗೆ ಕಾಂಗ್ರೆಸ್ ವಾಸ್ತವಾಂಶ ತಿರುಚಿ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತಿದೆ ಎಂದು ಹೇಳಿದರು.

‘ಭಾರತೀಯರ ಪೌರತ್ವ ಯಾವುದೇ ಕಾರಣಕ್ಕೂ ಕಸಿದುಕೊಳ್ಳುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ರಾಜ್ಯದ ಮುಸ್ಲಿಮರಿಗೆ ಏನಾದರೂ ಸಮಸ್ಯೆಯಾದರೆ ನಾನು ಹೊಣೆ ಎಂಬ ಮಾತಿನ ಮೂಲಕ ಸ್ಥೈರ್ಯ ತುಂಬಿದ್ದಾರೆ’ ಎಂದು ಹೇಳಿದರು.

ಯಾವ ಕಾರಣಕ್ಕೂ ದೇಶವಾಸಿಗಳ ಪೌರತ್ವ ಕಸಿಯುವುದಿಲ್ಲ. ಯಾವುದೇ ರೀತಿಯ ಆತಂಕಕ್ಕೂ ಭಾರತೀಯ ಮುಸ್ಲಿಮರು ಒಳಗಾಗಬಾರದು.ವಲಸಿಗರಿಗೆ ಅದ್ದೂರಿ ಸ್ವಾಗತ ನೀಡಿ ನಮ್ಮ ದೇಶ ಹಾಳಾಗಿದೆ. ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸರಿಪಡಿಸುತ್ತಿದೆ. ಬಾಂಬ್ ಹಾಕುವವರನ್ನು ದೇಶದಿಂದ ದೂರವಿಡುವ ಕೆಲಸ ಆಗಬೇಕಾಗಿದೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ನಿಲುವು ಒಂದೇ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಇಂಡಿಯನ್ ಕಾಂಗ್ರೆಸ್ ಬದಲು ಪಾಕಿಸ್ತಾನ ಎಂದು ಹೆಸರು ಬಲಾಯಿಸಿಕೊಳ್ಳುವುದು ಉತ್ತಮ ಎಂದು ಲೇವಡಿ ಮಾಡಿದರು.

ಶಾಸಕ ಕೆ.ಜಿ ಬೋಪಯ್ಯ ಮಾತನಾಡಿ, ಪೌರತ್ವ ಕಾಯ್ದೆ ಸಂವಿಧಾನ ವಿರೋಧಿ ಎಂದು ಹೇಳುವುದು ತಪ್ಪು. ತಿದ್ದುಪಡಿಗೆ ಸಂವಿಧಾನದಲ್ಲೇ ಅವಕಾಶವಿರುವಾಗ ವಿರೋಧಿಸುತ್ತಿರುವುದು ಎಷ್ಟ ಸರಿ ಎಂದು ಪ್ರಶ್ನಿಸಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಕೊಡಗಿನಲ್ಲಿಯೂ ಭಯೋತ್ಪಾದನೆಗೆಕಾಂಗ್ರೆಸ್ ಸಹಕಾರ ನೀಡುತ್ತಿರುವ ಬಗ್ಗೆ ಗುಮಾನಿಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕೇವಲ ಕುಟುಂಬ ರಾಜಕಾರಣ ಕಾಂಗ್ರೆಸ್ ಮಾಡಿದೆ. ಮೋದಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನೋಟ್ ಬ್ಯಾನ್ ಮೂಲಕ ದೇಶದಲ್ಲಿ ಆರ್ಥಿಕ ಶಿಸ್ತು ತಂದಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಮನು ಮುತ್ತಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೀನಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ.ಹರೀಶ್, ತಾ.ಪಂ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷ ಯಮುನಾ ಚಂಗಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT