ಭಾನುವಾರ, ಅಕ್ಟೋಬರ್ 2, 2022
19 °C

ಮೊಟ್ಟೆ ಎಸೆತ ಪ್ರಕರಣ: ಕೊಡಗಿನಲ್ಲಿ ಎಸ್ಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪೊಲೀಸರ ವಿರುದ್ಧ ಘೋಷಣೆ ಕೂಗಿದ ಅವರು ವಿಜಯ ವಿನಾಯಕ ದೇಗುಲದಿಂದ ಮೆರವಣಿಗೆ ಹೊರಟರು.

ಪೊಲೀಸರು ಬಿಜೆಪಿ ಕೈಗೊಂಬೆಗಳಾಗಿದ್ದಾರೆ ಎಂದು ಆರೋಪಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬದಲಾವಣೆ ಆಗಬೇಕು ಎಂದು ಆಗ್ರಹಿಸಿದರು. ಆಗಸ್ಟ್26 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಬಂದು ಬಿಜೆಪಿ ಕಾರ್ಯಕರ್ತರು ಮುಖಂಡರು ನೋಡಲಿ ಎಂದೂ ಸವಾಲೆಸೆದರು.

ಬಿಜೆಪಿ ಶಾಸಕರು ಮೊಟ್ಟೆ ಎಸೆದವರಿಗೆ ಬೆಂಬಲ ನೀಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳ ಮೂಲಕ ಆಯ್ಕೆಯಾಗಿದ್ದೀರಿ. ಅಭಿವೃದ್ದಿಯಲ್ಲಿ ವಿಫಲರಾಗಿದ್ದೀರಿ ಈ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ಅವರ ಶಕ್ತಿ ಕುಂದಿಸಲು ಮೊಟ್ಟೆ ಎಸೆಯಲಾಯಿತು ಎಂದು ದೂರಿದರು.

ಓದಿ...

ಚಿಕ್ಕಮಗಳೂರಿನಲ್ಲಿ ಬಿಜೆಪಿಗರಿಂದ ಸಿದ್ದರಾಮಯ್ಯಗೆ ಮತ್ತೆ ಕಪ್ಪು ಬಟ್ಟೆ ಪ್ರದರ್ಶನ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು 

ಸಾವರ್ಕರ್ ಹೋರಾಟ: ಮುಖ್ಯಮಂತ್ರಿ ಬೊಮ್ಮಾಯಿಗೆ ಸಿದ್ದರಾಮಯ್ಯ ಸವಾಲು 

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮ‌ಯ್ಯ ಕಿಡಿ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬೊಮ್ಮಾಯಿ ವಿರೋಧ 

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ: ಸಿಎಂ ಹೊಣೆ ಹೊರಲು ಡಿಕೆಶಿ ಆಗ್ರಹ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಇಂತಹ ಕೃತ್ಯ ಮರುಕಳಿಸಬಾರದು ಎಂದ ಎಚ್‌ಡಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು