ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಸತತ 2ನೇ ಬಾರಿಗೆ ಆಯ್ಕೆಯಾದ ಬಾಂಡ್ ಗಣಪತಿ

Published 4 ಏಪ್ರಿಲ್ 2024, 16:04 IST
Last Updated 4 ಏಪ್ರಿಲ್ 2024, 16:04 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಸತತ 2ನೇ ಅವಧಿಗೆ ಬಾಂಡ್ ಗಣಪತಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೆಟೋಳಿರ ಹರೀಶ್‌ ಆಯ್ಕೆಯಾದರು.

ಆಡಳಿತ ಮಂಡಳಿಯಲ್ಲಿ ಒಟ್ಟು 15 ಮಂದಿ ಸದಸ್ಯರಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಾಂಡ್ ಗಣಪತಿ ಅವರ ತಂಡ ಮೇಲುಗೈ ಸಾಧಿಸಿತ್ತು.

2014–19ನೇ ಅವಧಿಯಲ್ಲಿ ನಿರ್ದೇಶಕರಾಗಿದ್ದ ಬಾಂಡ್ ಗಣಪತಿ 2019–23ನೇ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು. ನಂತರ ಈ ಅವಧಿಯಲ್ಲೂ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಅ‍ಪೆಕ್ಸ್‌ ಬ್ಯಾಂಕಿಗೆ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಿಂದ ನಿರ್ದೇಶಕರಾಗಿ 2 ಬಾರಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT