ಮಡಿಕೇರಿ: ‘ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ನಗರದ ಲೇಖಕಿ ದೀಪಾಭಾಸ್ತಿ ಅವರ ಸಾಹಿತ್ಯಪರ ಚಟುವಟಿಕೆಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುವುದು’ ಎಂದು ಶಾಸಕ ಡಾ.ಮಂತರ್ಗೌಡ ಭರವಸೆ ನೀಡಿದರು.

ಇಲ್ಲಿನ ದೀಪಾಭಾಸ್ತಿ ಅವರ ಮನೆಗೆ ತೆರಳಿದ ಡಾ.ಮಂತರ್ಗೌಡ, ಕಾಫಿ ಹಾರದ ಮೂಲಕ ಗೌರವ ಸನ್ಮಾನವನ್ನು ನೆರವೇರಿಸಿದರು. ದೀಪಾಭಾಸ್ತಿ ಅವರು ನೀಡಿದ ಪ್ರಶಸ್ತಿ ವಿಜೇತ ಕೃತಿ ‘ಹಾರ್ಟ್ ಲ್ಯಾಂಪ್’ ಅನ್ನು ಸ್ವೀಕರಿಸಿದರು.

‘ಸಾಹಿತ್ಯ ಸಾಧನೆ ಕೊಡಗಿನ ಜನತೆಗೇ ಹೆಮ್ಮೆ ತಂದಿದ್ದು, ಬೂಕರ್ ಪ್ರಶಸ್ತಿಯು ಅನುವಾದ ಸಾಹಿತ್ಯದ ನಿಜವಾದ ಶಕ್ತಿಯನ್ನು ನಿರೂಪಿಸಿದೆ’ ಎಂದು ಶ್ಲಾಘಿಸಿದರು.

‘ಜಗತ್ತಿನಲ್ಲಿ ಸಾಹಿತ್ಯಕ್ಕಾಗಿನ ಶ್ರೇಷ್ಠ ಪ್ರಶಸ್ತಿಯನ್ನು ಮಡಿಕೇರಿಯ ಲೇಖಕಿ ಪಡೆದುಕೊಳ್ಳುವ ಮೂಲಕ ಕೊಡಗು, ಕರ್ನಾಟಕ ಮಾತ್ರವೇ ಅಲ್ಲದೇ ಭಾರತವೇ ಮಡಿಕೇರಿಯತ್ತ ಗಮನ ಹರಿಸುವಂತೆ ದೀಪಾಭಾಸ್ತಿ ಮಾಡಿದ್ದಾರೆ’ ಎಂದರು.

‘ಈ ಸಾಹಿತ್ಯ ಸಾಧನೆ ಜಗತ್ತಿನ ಸಾಹಿತ್ಯ ಲೋಕದ ಇತಿಹಾಸದಲ್ಲಿ ಅಚ್ಚಳಿಯದೇ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ನೆರವು ನೀಡಲು ಸಿದ್ದವಿರುವುದಾಗಿ’ ತಿಳಿಸಿದರು.

‘ಬಾನುಮುಷ್ತಾಕ್ ಅವರ ‘ಎದೆಯ ಹಣತೆ’ ಕೃತಿಯನ್ನು ‘ಹಾರ್ಟ್ ಲ್ಯಾಂಪ್’ ಎಂದು ಇಂಗ್ಲೀಷ್ಗೆ ಅನುವಾದಿಸಲು ಪಟ್ಟಿರಬಹುದಾದ ಶ್ರಮ ಊಹೆಗೂ ನಿಲುಕದ್ದು. ಮಡಿಕೇರಿಯ ಪರಿಸರದ ನಡುವಿನ ಮನೆಯಲ್ಲಿಯೇ ಇಂತಹ ಪ್ರಯತ್ನವನ್ನು ದೀಪಾಭಾಸ್ತಿ ಮಾಡಿರುವುದು ಹೆಮ್ಮೆ ಪಡುವ ವಿಚಾರ’ ಎಂದರು.

ಕೊಡಗಿನ ವಿವಿಧ ಶಿಕ್ಷಣ ಸಂಸ್ಥೆಗಳ ಆಸಕ್ತ ವಿದ್ಯಾರ್ಥಿಗಳೊಂದಿಗೆ ಲೇಖಕಿಯ ಸಂವಾದ ಏರ್ಪಡಿಸಿ, ಸಾಹಿತ್ಯ, ಲೇಖನ ಬರೆಯುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ದೀಪಾಭಾಸ್ತಿಯ ಬರವಣಿಗೆಗೆ ಬಾಲ್ಯದಿಂದಲೇ ಪ್ರೋತ್ಸಾಹ ನೀಡಿದ ಪೋಷಕರನ್ನೂ ಡಾ.ಮಂತರ್ ಗೌಡ ಈ ಸಂದರ್ಭ ಅಭಿನಂದಿಸಿದರು.

‘ಸುಮಾರು 3 ವರ್ಷಗಳ ಅವಿರತ ಶ್ರಮ ಈ ಸಾಧನೆಯ ಹಿಂದಿದೆ’ ಎಂದು ಹೇಳಿದ ದೀಪಾಭಾಸ್ತಿ, ಸದ್ಯದಲ್ಲಿಯೇ ಲಂಡನ್ಗೆ ಮತ್ತೆ ತೆರಳಿ ಅಲ್ಲಿಂದ ಜಗತ್ತಿನ ಬೇರೆ ಬೇರೆ ದೇಶಗಳಿಗೆ ಸಂಚರಿಸಿ ಅಲ್ಲಿ ‘ಹಾರ್ಟ್ ಲ್ಯಾಂಪ್’ ಕೃತಿಯ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದರು.

‘ಮಡಿಕೇರಿಯ ನಿಸರ್ಗ ರಮಣೀಯತೆಯಿಂದಾಗಿ ಪತಿಯೊಂದಿಗೆ ತಾನು ಬೆಂಗಳೂರಿನಿಂದ ಇಲ್ಲಿಗೇ ಬಂದು ನೆಲಸಿದ್ದಾಗಿ ಹೇಳಿದ ದೀಪಾಭಾಸ್ತಿ, ಕೊಡಗಿನ ಪ್ರಕೃತಿ ಸಿರಿ ಲೇಖಕರಿಗೆ ನಿಜವಾದ ಸ್ಪೂರ್ತಿಯಾಗಿದೆ’ ಎಂದು ಹೇಳಿದರು.

ದೀಪಾಭಾಸ್ತಿ ಪತಿ ಚೆಟ್ಟೀರ ನಾಣಯ್ಯ, ಪೋಷಕರಾದ ಪ್ರಕಾಶ್ ಭಾಸ್ತಿ, ಸುಧಾಭಾಸ್ತಿ, ಜಾನಪದ ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್ ಭಾಗವಹಿಸಿದ್ದರು.

‘ಕಾಲೇಜಿಗೆ ಮತ್ತೊಂದು ಗರಿ ಮೂಡಿದಂತಾಯಿತು’

ಲೇಖಕಿ ದೀಪಾಭಾಸ್ತಿ ಅವರನ್ನು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾಭಾಸ್ತಿ ಹಾಗೂ ಅವರ ಪತಿ ಚೆಟ್ಟೀರ ನಾಣಯ್ಯ ಅವರನ್ನು ಗೌರವಿಸಿದರು. ಈ ವೇಳೆ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ‘ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿನಿಯಾಗಿರುವ ದೀಪಾಭಾಸ್ತಿ ಅವರ ಸಾಧನೆಯನ್ನು ಜಗತ್ತೇ ಮೆಚ್ಚಿಕೊಂಡಿದೆ. ಇದೊಂದು ಹೆಮ್ಮೆಯ ಕ್ಷಣ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿನಲ್ಲಿ ರಾರಾಜಿಸುತ್ತಿರುವ ಕಾಲೇಜಿನ ಹಿರಿಮೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದು ಕಾಲೇಜಿಗೆ ಮತ್ತೊಂದು ಗರಿ ಬಂದತಾಗಿದೆ’ ಎಂದು ತಿಳಿಸಿದರು.

ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ವೇಳೆ ಅವರು ಅಭಿನಂದಿಸಿದರು.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ‘ಬಾನುಮುಷ್ತಾಕ್ ಅವರ ಕನ್ನಡ ಕೃತಿಯನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಿರುವುದು ಸುಲಭದ ಕಾರ್ಯವಲ್ಲ್ಲ. ಕನ್ನಡ ಭಾಷಾ ಕೃತಿಯನ್ನು ಭಾಷಾ ಶ್ರೀಮಂತಿಕೆಗೆ ಚ್ಯುತಿ ಬಾರದಂತೆ ಆಂಗ್ಲಭಾಷೆಗೆ ಅನುವಾದಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವುದು ಶ್ಲಾಘನೀಯ’ ಎಂದರು.

ಇದು ಕರ್ನಾಟಕ ಕೊಡಗು ಮಾತ್ರವಲ್ಲದೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಕೂಡ ಹೆಮ್ಮೆ ಪಡುವಂತಹ ಸಾಧನೆಯಾಗಿದೆ ಎಂದು ತಿಳಿಸಿದರು. ಲೇಖಕಿ ದೀಪಾಭಾಸ್ತಿ ಮಾತನಾಡಿ ‘ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಈ ಪ್ರಶಸ್ತಿ ಲಭ್ಯವಾಗಿದ್ದು ಪತಿಯ ಸಹಕಾರ ಹಾಗೂ ಪೋಷಕರ ಪ್ರೋತ್ಸಾಹದಿಂದ ಯಶಸ್ಸು ಪಡೆಯಲು ಸಾಧ್ಯವಾಯಿತು’ ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಉಪನ್ಯಾಸಕರಾದ ಪ್ರೊ.ಕೆ.ಪಿ.ನಾಗರಾಜು ಪ್ರೊ.ಆರ್.ರಾಜೇಂದ್ರ ಪ್ರೊ.ಗಾಯತ್ರಿದೇವಿ ಡಾ.ಶೈಲಶ್ರೀ ಡಾ.ಪ್ರದೀಪ್ ಬಂಡಾರಿ ಬಿ.ಎಚ್.ತಳವಾರ ಎಚ್.ಆರ್.ರಮೇಶ್ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ನಿರ್ದೇಶಕರಾದ ಎಸ್.ಆರ್.ವತ್ಸಲಾ ಲೋಹಿತ್ ಮಾಗುಲುಮನೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.