ಶನಿವಾರ, ನವೆಂಬರ್ 26, 2022
22 °C

ಸಬ್ಸಿಡಿ ಹಣಕ್ಕೆ ಲಂಚ; ಕಚೇರಿ ಸಹಾಯಕಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಟ್ಯಾಕ್ಸಿ ಖರೀದಿಗಾಗಿ ಅಲ್ಪಸಂಖ್ಯಾತರಿಗೆ ಸರ್ಕಾರ ನೀಡುವ ಸಬ್ಸಿಡಿ ಹಣ ಮಂಜೂರು ಮಾಡುವುದಕ್ಕಾಗಿ ₹ 10 ಸಾವಿರ ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿ ಸಹಾಯಕಿ ಲತಾ ಆಚಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ವ್ಯಕ್ತಿಯೊಬ್ಬರು ನಿಗಮದಡಿ ಟ್ಯಾಕ್ಸಿಯನ್ನು ಖರೀದಿಸಿದ್ದರು. ಇವರಿಗೆ ಸಬ್ಸಿಡಿ ಹಣ ₹ 2.5 ಲಕ್ಷ ನೀಡಬೇಕಿತ್ತು. ಇದಕ್ಕಾಗಿ ಆರೋಪಿಯು ಶೇ 10ರಷ್ಟು ಲಂಚ ನೀಡಬೇಕು ಎಂದು ಕೇಳಿದ್ದರು. ಈ ಕುರಿತು ವ್ಯಕ್ತಿಯು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಈ ಸಂಬಂಧ ₹ 10 ಸಾವಿರ ಲಂಚ ತೆಗೆದುಕೊಳ್ಳುವಾಗ ಲತಾ ಆಚಾರ್ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಮೈಸೂರು ವಿಭಾಗದ ಎಸ್‌.ಪಿ ಸುರೇಶ್‌ಬಾಬು ಮಾರ್ಗದರ್ಶನದಲ್ಲಿ ಕೊಡಗು ಜಿಲ್ಲೆಯ ಡಿವೈಎಸ್‌ಪಿ ಎಂ.ಎಸ್.ಪವನ್‌ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು