ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕೆಂಪೇಗೌಡರ ಪ್ರತಿಮೆ ನಿರ್ಮಿಸಿ, ಅಧ್ಯಯನ ಕೇಂದ್ರ ತೆರೆಯಿರಿ’

ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವದಲ್ಲಿ ಕೇಳಿ ಬಂತು ಹಲವು ಒತ್ತಾಯಗಳು, ಸಲಹೆಗಳು, ಸೂಚನೆಗಳು
Published 28 ಜೂನ್ 2024, 3:25 IST
Last Updated 28 ಜೂನ್ 2024, 3:25 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಬೇಕು, ಬೆಂಗಳೂರು ಅಥವಾ ಮೈಸೂರಿನಲ್ಲಿ ‘ಕೆಂಪೇಗೌಡರ ಅಧ್ಯಯನ ಕೇಂದ್ರ’ ಆರಂಭಿಸಬೇಕು ಎಂಬ ಒತ್ತಾಯಗಳು ಇಲ್ಲಿನ ಗಾಂಧಿ ಭವನದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವದಲ್ಲಿ ಕೇಳಿ ಬಂತು.

ಚಿತ್ರಕಲಾ ಶಿಕ್ಷಕರಾದ ಬಿ.ಆರ್.ಸತೀಶ್ ಅವರು ಕೆಂಪೇಗೌಡರ ಚಿತ್ರವನ್ನು ಬಿಡಿಸುವ ಮೂಲಕ ಹಾಗೂ ಮೈಸೂರಿನ ರಾಘವೇಂದ್ರ ಪ್ರಸಾದ್ ತಂಡದವರು ಕೆಂಪೇಗೌಡರ ಕುರಿತು ಹಾಡು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು, ‘ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದಲ್ಲಿ ನಿರ್ಮಾಣ ಮಾಡಲು ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಕೆಂಪೇಗೌಡರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದೂ ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಎಲ್ಲಾ ಸಂಘಟನೆಗಳು ಸೇರಿ ಕೆಂಪೇಗೌಡ ಅವರ ಜಯಂತಿಯನ್ನು ಮತ್ತಷ್ಟು ಅದ್ಧೂರಿಯಾಗಿ ಆಚರಿಸೋಣ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಬೆಂಗಳೂರು ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಹೊಂದಿದೆ. ಕುಡಿಯುವ ನೀರು ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ. ಹಿಂದೆ ನಿರ್ಮಿಸಿದ ಕಬ್ಬನ್ ಪಾರ್ಕ್ ಮತ್ತು ಲಾಲ್‍ಬಾಗ್ ಬೆಂಗಳೂರಿನ ಚಂದವನ್ನು ಹೆಚ್ಚಿಸಿದೆ ಎಂದರು.

ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರಾದ ಕುಯ್ಯಮುಡಿ ಅಶ್ವಿನಿಕುಮಾರ್ ಮಾತನಾಡಿ, ‘ಆದರ್ಶ ಆಡಳಿತಗಾರ, ದೂರದೃಷ್ಟಿಯ ಚಿಂತಕ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ‘ಕೆಂಪೇಗೌಡರ ಅಧ್ಯಯನ ಕೇಂದ್ರ’ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ‘ಬೆಂಗಳೂರು ನಿರ್ಮಾಣ ಮಾಡಿದ ಕೆಂಪೇಗೌಡರ ಆಡಳಿತದ ಕೆಲಸಗಳು ಇಂದಿಗೂ ಸಹ ಸಾರ್ವಕಾಲೀಕವಾಗಿದೆ’ ಎಂದರು.

ಕೆಂಪೇಗೌಡರ ಜೀವನ ಚರಿತ್ರೆ ಕುರಿತು ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಸ್.ಎನ್.ಚಂಗಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಚಿತ್ರಕಲಾ ಶಿಕ್ಷಕ ಬಿ.ಆರ್.ಸತೀಶ್ ಅವರು ಸ್ಥಳದಲ್ಲೇ ಬಿಡಿಸಿದ ಕೆಂಪೇಗೌಡರ ಚಿತ್ರವನ್ನು ಶಾಸಕ ಡಾ.ಮಂತರ್‌ಗೌಡ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ನೀಡಿದರು
ಚಿತ್ರಕಲಾ ಶಿಕ್ಷಕ ಬಿ.ಆರ್.ಸತೀಶ್ ಅವರು ಸ್ಥಳದಲ್ಲೇ ಬಿಡಿಸಿದ ಕೆಂಪೇಗೌಡರ ಚಿತ್ರವನ್ನು ಶಾಸಕ ಡಾ.ಮಂತರ್‌ಗೌಡ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT