ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ- ಸೋಮವಾರಪೇಟೆ ಮಾರ್ಗ ಬೆಂಗಳೂರಿಗೆ ಬಸ್‌ ಸಂಚಾರಕ್ಕೆ ಚಾಲನೆ

Published 13 ಜೂನ್ 2024, 16:53 IST
Last Updated 13 ಜೂನ್ 2024, 16:53 IST
ಅಕ್ಷರ ಗಾತ್ರ

ಮಡಿಕೇರಿ: ಕೆಎಸ್‌ಆರ್‌ಟಿಸಿಯ ನೂತನ ‘ಅಶ್ವಮೇಧ’ ಬಸ್‍ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15ಕ್ಕೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ. ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ’ ಎಂದರು.

ಮಡಿಕೇರಿ ಕೆಎಸ್‍ಆರ್‌ಟಿಸ ಘಟಕದಿಂದ ಸೋಮವಾರಪೇಟೆ ಮಾರ್ಗದಲ್ಲಿ 3 ಬಸ್‍ಗಳು, ಕುಶಾಲನಗರದಿಂದ 2 ಬಸ್‍ಗಳು ಸಂಚರಿಸುತ್ತಿವೆ ಎಂದು ತಿಳಿಸಿದರು.

ಮಡಿಕೇರಿ ಕೆಎಸ್‍ಆರ್‌ಟಿಸಿ ಘಟಕದಲ್ಲಿ 97 ಬಸ್‍ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್‍ಆರ್‌ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್‍ಗಳು ಸಂಚರಿಸಲಿವೆ ಎಂದು ಹೇಳಿದರು.

ಮಡಿಕೇರಿ ಕೆಎಸ್‍ಆರ್‌ಟಿಸಿ ಘಟಕದ ವ್ಯವಸ್ಥಾಪಕ ವೀರಭದ್ರಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT