ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ | ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ನಾಲ್ವರಿಗೆ ಗಾಯ

Published 29 ಏಪ್ರಿಲ್ 2024, 15:19 IST
Last Updated 29 ಏಪ್ರಿಲ್ 2024, 15:19 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣದಿಂದ ಹಾರಂಗಿಗೆ ಕಡೆಗೆ ತೆರಳುತ್ತಿದ್ದ ಕಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಜಯಪ್ರಕಾಶ್ ಎಂಬುವರಿಗೆ ಸೇರಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಾರಂಗಿ ಮುಖ್ಯ ರಸ್ತೆಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರಿಗೆ ಕಾಲಿಗೆ ತೀವ್ರವಾದ ಗಾಯವಾಗಿದೆ. ಒಬ್ಬರ ಕಾಲು ತುಂಡಾಗಿದೆ. ಗಾಯಾಳುಗಳನ್ನು ಕುಶಾಲನಗರ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಧಳಕ್ಕೆ ಕುಶಾಲನಗರ ಸಂಚಾರಿ ಪೋಲೀಸ್ ಠಾಣಾಧಿಕಾರಿ ಕಾಶಿನಾಥ್ ಬಗಾಲಿ ಭೇಟಿ ನೀಡಿದರು.

ಕೂಡಿಗೆ ಬಳಿ ಅಪಘಾತ: ಸಮೀಪದ ಕೂಡಿಗೆ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರದಿಂದ ಹಾಸನ ಕಡೆಗೆ ಕಾರು ಹೋಗುತ್ತಿತ್ತು. ರಸ್ತೆ ಉಬ್ಬಿಗೆ ಬಿಳಿಪಟ್ಟಿ ಹಾಕದ ಕಾರಣ ಬೈಕ್ ಸವಾರ ವೇಗವಾಗಿ ಚಲಾಯಿಸಿದ ಕಾರಣ ನಿಯಂತ್ರಣ ತಪ್ಪಿ ಕಾರಿನ‌ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾನೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆ ಉಬ್ಬು ಗಳಿಗೆ ಬಣ್ಣ ಬಳಿಯದ ಬಗ್ಗೆ ಸಾರ್ವಜನಿಕರು ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT