ಗೋವು ಸಾಗಣೆ: ಹಲ್ಲೆ ಖಂಡಿಸಿ ಪ್ರತಿಭಟನೆ

7
ಆರೋಪಿಗಳ ಬಂಧನಕ್ಕೆ ಹಿಂದೂ ಹಿತರಕ್ಷಣಾ ವೇದಿಕೆ ಸದಸ್ಯರ ಆಗ್ರಹ

ಗೋವು ಸಾಗಣೆ: ಹಲ್ಲೆ ಖಂಡಿಸಿ ಪ್ರತಿಭಟನೆ

Published:
Updated:
Deccan Herald

ಮಡಿಕೇರಿ: ಗೋವು ಸಾಗಣೆ ಮಾಡುತ್ತಿದ್ದ ವಾಹನ ತಡೆದ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು ಅವರನ್ನು ಬಂಧಿಸುವಂತೆ ಆಗ್ರಹಿಸಿ, ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. 

ತಾಲ್ಲೂಕಿನ ಅಪ್ಪಂಗಳ ಗ್ರಾಮದಲ್ಲಿ ಗುರುವಾರ ರಾತ್ರಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ವೇಳೆ ಗೋವು ಸಾಗಣೆ ಮಾಡುತ್ತಿದ್ದ ವ್ಯಕ್ತಿಗಳನ್ನು ಪ್ರಶ್ನಿಸಿದಾಗ ನಾಲ್ವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರನ್ನು ಬಂಧಿಸಬೇಕು ಎಂದು ವೇದಿಕೆ ಅಧ್ಯಕ್ಷ ಕುಕ್ಕೆರ ಅಜಿತ್ ಆಗ್ರಹಿಸಿದರು. ಸಳೀಯರಾದ ಮಧು, ಹೇಮಂತ್, ಮಂಜು, ತಿರುಪತಿ ಗಾಯಗೊಂಡಿದ್ದಾರೆ.

ಗೋವು ಸಾಗಣೆ ವಾಹನ ತಡೆದ ಬಳಿಕ ಬೆಟ್ಟಗೇರಿ, ಕೊಟ್ಟಮುಡಿ ಗ್ರಾಮದಿಂದ ಬಂದ ಮುಸ್ಲಿಂ ಯುವಕರ ತಂಡವು ಗಲಾಟೆಗೂ ಮುಂದಾಯಿತು. ಕೆಟ್ಟ ಶಬ್ದಗಳಿಂದ ನಿಂದಿಸಿದ್ದು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಗೋವುಗಳ ಕಳವು ವ್ಯಾಪಕವಾಗಿ ನಡೆಯುತ್ತಿದೆ. ಅದನ್ನು ತಡೆಯಲು ಮುಂದಾದವರ ಮೇಲೆ ಹಲ್ಲೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರಕೃತಿ ವಿಕೋಪದಿಂದ ಜಿಲ್ಲೆಯ ಜನರು ನೊಂದಿದ್ದಾರೆ. ಗೋಹತ್ಯೆ ವಿಚಾರವು ಜಿಲ್ಲೆಯಲ್ಲಿ ಸಂಘರ್ಷಕ್ಕೆ ಕಾರಣವಾಗುವುದು ಬೇಡ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗಣೇಶ್ ಕಡಗದಾಳು, ಸುಭಾಷ್‌ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !