ಕುಶಾಲನಗರ: ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರಿ ಕುಶಾಲನಗರ ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ₹ 44 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಮೃತ್ 2.0 ಯೋಜನೆಯಡಿ ಕಾವೇರಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಯಿತು.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಚಂದ್ರ ಮಾತನಾಡಿ, ‘ಪಟ್ಟಣದ 20 ಕಿಲೋ ಮೀಟರ್ ವ್ಯಾಪ್ತಿಯ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ಪೂರೈಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ದಿಂಡಿಗಾಡು ಬಳಿ ಕಾವೇರಿ ನದಿಯಲ್ಲಿ ಜಾಕ್ವೆಲ್ ನಿರ್ಮಿಸಲು ಜಾಗ ಪರಿಶೀಲಿಸಲಾಗಿದೆ. ಈ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ 50, ರಾಜ್ಯ ಸರ್ಕಾರ ಶೇ 40 ಹಾಗೂ ಸ್ಥಳೀಯ ಸಂಸ್ಥೆ ಶೇ 10ರಷ್ಟು ಪಾಲು ಹಣವನ್ನು ಭರಿಸಬೇಕಾಗುತ್ತದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಪಾರ್ಕಿಂಗ್ ಸಮಸ್ಯೆ: ಪಟ್ಟಣದಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆ ಆಗುತ್ತಿರುವ ಬಗ್ಗೆ ಜೆಡಿಎಸ್ನ ಸುರಯ್ಯಾಭಾನು ಪ್ರಸ್ತಾಪಿಸಿದರು. ಸರ್ಕಾರಿ ಆಸ್ಪತ್ರೆ ಬಳಿ ಆರಂಭವಾಗಿರುವ ಮಾಲ್ನಿಂದಾಗಿ ಈ ಭಾಗದಲ್ಲಿ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ ಆಗುತ್ತಿದ್ದು, ಈ ಮಾಲ್ ಮುಚ್ಚಿಸಿ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ‘ಆ ಮಾಲ್ಗೆ ಪುರಸಭೆಯಿಂದ ಎನ್ಒಸಿ ಕೊಟ್ಟಿಲ್ಲ. ಪರವಾನಗಿಯೂ ಇಲ್ಲ ಎಂದು ಮಾಹಿತಿ ನೀಡಿದರು. ‘ಹಾಗಾದರೆ ಆ ಮಾಲ್ ತೆರೆಯಲು ಹೇಗೆ ಅವಕಾಶ ಕೊಟ್ಟಿದ್ದೀರಿ? ಕೂಡಲೇ ಮುಚ್ಚಿಸಿ’ ಎಂದು ಬಹುತೇಕ ಸದಸ್ಯರು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಡಿ.ಕೆ.ತಿಮ್ಮಪ್ಪ, ‘ತಪ್ಪು ಮಾಡಿದವರಿಗೆ ತಿದ್ದಿಕೊಳ್ಳಲು ಒಮ್ಮೆ ಅವಕಾಶ ಕೊಡಿ, ನಂತರ ಕ್ರಮ ತೆಗೆದುಕೊಳ್ಳಿ’ ಎಂದು ಸಲಹೆ ನೀಡಿದರು.

ಪಟ್ಟಣದಲ್ಲಿ ಸೆಸ್ಕ್ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೆಸ್ಕ್ ಇಲಾಖೆ ಅಧಿಕಾರಿ ಸಮ್ಮುಖದಲ್ಲಿ ಚರ್ಚೆಗೆ ಬಂತು. ಈ ಸಂದರ್ಭ ಮಧ್ಯಪ್ರವೇಶಿಸಿದ ಅಧ್ಯಕ್ಷ ಜಯಲಕ್ಷ್ಮಿ ಪಟ್ಟಣದಲ್ಲಿ ವಿದ್ಯುತ್ ಸಂಬಂಧಿ ಸಮಸ್ಯೆ ಬಗೆಹರಿಸಲು ಶಾಸಕರ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ಕರೆಯಲಾಗುವುದು ಎಂದರು.

ಇದೇ ಮಾದರಿಯಲ್ಲಿ ಕಾನೂನು ಮತ್ತು ಸಂಚಾರಿ ವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸರೊಂದಿಗೆ ಪ್ರತ್ಯೇಕ ಸಭೆ ನಡೆಸಲು ಕೂಡ ಸದಸ್ಯರು ಸಲಹೆ ಮಾಡಿದರು.

ಉಪಾಧ್ಯಕ್ಷೆ ಪುಟ್ಟಲಕ್ಷ್ಮೀ, ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಸಭೆಯ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಉದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಫುಟ್ಪಾತ್ ಒತ್ತುವರಿ ತೆರವಿಗೆ ನಿರ್ಣಯ

ಪಟ್ಟಣದಲ್ಲಿ ವಾಹನ ನಿಲುಗಡೆಗೆ ತುಂಬ ಸಮಸ್ಯೆ ಉಂಟಾಗುತ್ತಿದೆ. ಜೊತೆಗೆ ಪಾದಚಾರಿ ಮಾರ್ಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಅತಿಕ್ರಮಣ ತೆರವು ಮಾಡುವಂತೆ ಸದಸ್ಯ ಶೇಖ್ ಕಲೀಮುಲ್ಲಾ ಒತ್ತಾಯಿಸಿದರು. ಇದಕ್ಕೆ ಕೆ.ಆರ್.ರೇಣುಕಾ ತಿಮ್ಮಪ್ಪ ಹಾಗೂ ವಿ.ಎಸ್. ಆನಂದಕುಮಾರ್ ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ‘ಡೆಲ್ಟಾ ಯೋಜನೆ ಅಡಿಯಲ್ಲಿ ಬಿಎಂ ರಸ್ತೆ ಬದಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂದರ್ಭ ಎಂಜಿನಿಯರಿಂಗ್ ಕಾಲೇಜಿನಿಂದ ಕೊಪ್ಪ ಗೇಟ್ ತನಕ ಫುಟ್ಪಾತ್ ನಿರ್ಮಿಸಲಾಗುವುದು. ಎಲ್ಲಾ ಒತ್ತುವರಿ ತೆರವು ಮಾಡಲಾಗುವುದು’ ಎಂದರು. ಟೋಲ್ ಗೇಟ್ನಿಂದ ಮಾದಪಟ್ಟಣ ಎಂಜಿನಿಯರ್ ಕಾಲೇಜುವರೆಗೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಎಚ್ಚರಿಕೆ: ಯುಜಿಡಿ ಕಾಮಗಾರಿಯ ವಿಷಯ ಈ ಸಭೆಯಲ್ಲೂ ಪ್ರತಿಧ್ವನಿಸಿತು. ಇನ್ನು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಡಿ.ಕೆ. ತಿಮ್ಮಪ್ಪ ಎಚ್ಚರಿಸಿದರು. ‘ಕಾವೇರಿ ನದಿ ಸೇರುತ್ತಿರುವ ತ್ಯಾಜ್ಯಕ್ಕೆ ಮೊದಲು ತಡೆ ನೀಡಬೇಕು. ಹಾಗಾಗಿ ಕೂಡಲೇ ಚಾಲನೆ ನೀಡಬೇಕು’ ಎಂದು ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಯುಜಿಡಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಚಂದ್ರ ‘ವಿದ್ಯುತ್ ಸಂಪರ್ಕ ಆದ ಕೂಡಲೇ ಯುಜಿಡಿ ಕಾರ್ಯಾರಂಭ ಮಾಡಲಿದೆ’ ಎಂದು ಹೇಳಿದರು.

ಕುಶಾಲನಗರ: ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರಿ ಕುಶಾಲನಗರ ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ₹ 44 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಮೃತ್ 2.0 ಯೋಜನೆಯಡಿ ಕಾವೇರಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಯಿತು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಚಂದ್ರ ಮಾತನಾಡಿ ‘ಪಟ್ಟಣದ 20 ಕಿಲೋ ಮೀಟರ್ ವ್ಯಾಪ್ತಿಯ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ಪೂರೈಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ದಿಂಡಿಗಾಡು ಬಳಿ ಕಾವೇರಿ ನದಿಯಲ್ಲಿ ಜಾಕ್ವೆಲ್ ನಿರ್ಮಿಸಲು ಜಾಗ ಪರಿಶೀಲಿಸಲಾಗಿದೆ. ಈ ಯೋಜನೆ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ 50 ರಾಜ್ಯ ಸರ್ಕಾರ ಶೇ 40 ಹಾಗೂ ಸ್ಥಳೀಯ ಸಂಸ್ಥೆ ಶೇ 10ರಷ್ಟು ಪಾಲು ಹಣವನ್ನು ಭರಿಸಬೇಕಾಗುತ್ತದೆ’ ಎಂದು ಸಭೆಗೆ ಮಾಹಿತಿ ನೀಡಿದರು. ಪಾರ್ಕಿಂಗ್ ಸಮಸ್ಯೆ: ಪಟ್ಟಣದಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆ ಆಗುತ್ತಿರುವ ಬಗ್ಗೆ ಜೆಡಿಎಸ್ನ ಸುರಯ್ಯಾಭಾನು ಪ್ರಸ್ತಾಪಿಸಿದರು. ಸರ್ಕಾರಿ ಆಸ್ಪತ್ರೆ ಬಳಿ ಆರಂಭವಾಗಿರುವ ಮಾಲ್ನಿಂದಾಗಿ ಈ ಭಾಗದಲ್ಲಿ ವಾಹನ ದಟ್ಟಣೆ ಪಾರ್ಕಿಂಗ್ ಸಮಸ್ಯೆ ಆಗುತ್ತಿದ್ದು ಈ ಮಾಲ್ ಮುಚ್ಚಿಸಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ‘ಆ ಮಾಲ್ಗೆ ಪುರಸಭೆಯಿಂದ ಎನ್ಒಸಿ ಕೊಟ್ಟಿಲ್ಲ. ಪರವಾನಗಿಯೂ ಇಲ್ಲ ಎಂದು ಮಾಹಿತಿ ನೀಡಿದರು. ‘ಹಾಗಾದರೆ ಆ ಮಾಲ್ ತೆರೆಯಲು ಹೇಗೆ ಅವಕಾಶ ಕೊಟ್ಟಿದ್ದೀರಿ? ಕೂಡಲೇ ಮುಚ್ಚಿಸಿ’ ಎಂದು ಬಹುತೇಕ ಸದಸ್ಯರು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಡಿ.ಕೆ.ತಿಮ್ಮಪ್ಪ ‘ತಪ್ಪು ಮಾಡಿದವರಿಗೆ ತಿದ್ದಿಕೊಳ್ಳಲು ಒಮ್ಮೆ ಅವಕಾಶ ಕೊಡಿ ನಂತರ ಕ್ರಮ ತೆಗೆದುಕೊಳ್ಳಿ’ ಎಂದು ಸಲಹೆ ನೀಡಿದರು. ಪಟ್ಟಣದಲ್ಲಿ ಸೆಸ್ಕ್ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೆಸ್ಕ್ ಇಲಾಖೆ ಅಧಿಕಾರಿ ಸಮ್ಮುಖದಲ್ಲಿ ಚರ್ಚೆಗೆ ಬಂತು. ಈ ಸಂದರ್ಭ ಮಧ್ಯಪ್ರವೇಶಿಸಿದ ಅಧ್ಯಕ್ಷ ಜಯಲಕ್ಷ್ಮಿ ಪಟ್ಟಣದಲ್ಲಿ ವಿದ್ಯುತ್ ಸಂಬಂಧಿ ಸಮಸ್ಯೆ ಬಗೆಹರಿಸಲು ಶಾಸಕರ ನೇತೃತ್ವದಲ್ಲಿ ಸದ್ಯದಲ್ಲೇ ಸಭೆ ಕರೆಯಲಾಗುವುದು ಎಂದರು. ಇದೇ ಮಾದರಿಯಲ್ಲಿ ಕಾನೂನು ಮತ್ತು ಸಂಚಾರಿ ವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸರೊಂದಿಗೆ ಪ್ರತ್ಯೇಕ ಸಭೆ ನಡೆಸಲು ಕೂಡ ಸದಸ್ಯರು ಸಲಹೆ ಮಾಡಿದರು. ಉಪಾಧ್ಯಕ್ಷೆ ಪುಟ್ಟಲಕ್ಷ್ಮೀ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಭೆಯ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಉದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಫುಟ್ಪಾತ್ ಒತ್ತುವರಿ ತೆರವಿಗೆ ನಿರ್ಣಯ ಪಟ್ಟಣದಲ್ಲಿ ವಾಹನ ನಿಲುಗಡೆಗೆ ತುಂಬ ಸಮಸ್ಯೆ ಉಂಟಾಗುತ್ತಿದೆ. ಜೊತೆಗೆ ಪಾದಚಾರಿ ಮಾರ್ಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸದಸ್ಯರಾದ ಖಲಿಮುಲ್ಲಾ ರೇಣುಕಾ ಹಾಗೂ ತಿಮ್ಮಪ್ಪ ಅವರು ದೂರಿದರು. ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು. ಟೋಲ್ ಗೇಟ್ನಿಂದ ಮಾದಪಟ್ಟಣ ಎಂಜಿನಿಯರ್ ಕಾಲೇಜುವರೆಗೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಟ್ಟಣದಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಮಾಡುವಂತೆ ಸದಸ್ಯ ಶೇಖ್ ಕಲೀಮುಲ್ಲಾ ಒತ್ತಾಯಿಸಿದರು. ಇದಕ್ಕೆ ಕೆ.ಆರ್.ರೇಣುಕಾ ವಿ.ಎಸ್. ಆನಂದಕುಮಾರ್ ಧ್ವನಿಗೂಡಿಸಿದರು. ಎಲ್ಲೆಂದರಲ್ಲಿ ವಾಹನ ನಿಲ್ಲಿಸಲಾಗುತ್ತಿದೆ. ಪಾದಚಾರಿಗಳು ನಡೆದಾಡಲು ಜಾಗವಿಲ್ಲದಂತಾಗಿದೆ. ಯಾವುದೇ ತಾರತಮ್ಯ ಮಾಡದೇ ನಿರ್ದಾಕ್ಷಿಣ್ಯವಾಗಿ ಫುಟ್ಪಾತ್ ಒತ್ತುವರಿ ತೆರವು ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಡೆಲ್ಟಾ ಯೋಜನೆ ಅಡಿಯಲ್ಲಿ ಬಿಎಂ ರಸ್ತೆ ಬದಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂದರ್ಭ ಎಂಜಿನಿಯರಿಂಗ್ ಕಾಲೇಜಿನಿಂದ ಕೊಪ್ಪ ಗೇಟ್ತನಕ ಫುಟ್ಪಾತ್ ನಿರ್ಮಿಸಲಾಗುವುದು. ಎಲ್ಲಾ ಒತ್ತುವರಿ ತೆರವು ಮಾಡಲಾಗುವುದು ಎಂದರು. ಎಚ್ಚರಿಕೆ: ಯುಜಿಡಿ ಕಾಮಗಾರಿಯ ವಿಷಯ ಈ ಸಭೆಯಲ್ಲೂ ಪ್ರತಿಧ್ವನಿಸಿತು. ಇನ್ನು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಡಿ.ಕೆ. ತಿಮ್ಮಪ್ಪ ಎಚ್ಚರಿಸಿದರು. ‘ಕಾವೇರಿ ನದಿ ಸೇರುತ್ತಿರುವ ತ್ಯಾಜ್ಯಕ್ಕೆ ಮೊದಲು ತಡೆ ನೀಡಬೇಕು. ಹಾಗಾಗಿ ಕೂಡಲೇ ಚಾಲನೆ ನೀಡಬೇಕು’ ಎಂದು ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಯುಜಿಡಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಚಂದ್ರ ‘ವಿದ್ಯುತ್ ಸಂಪರ್ಕ ಆದ ಕೂಡಲೇ ಯುಜಿಡಿ ಕಾರ್ಯಾರಂಭ ಮಾಡಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.