ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಡು ಎಂಬಲ್ಲಿ ಸಂಚಾರಕ್ಕೆ ಮಂಗಳವಾರ ದೋಣಿ ವ್ಯವಸ್ಥೆ ಕಲ್ಪಿಸಲಾಯಿತು.
ಧಾರಾಕಾರ ಮಳೆಯಿಂದಾಗಿ ಭಾಗಮಂಡಲ ಮಂಗಳವಾರ ಜಲಾವೃತವಾಗಿರುವುದು.
ನಾಪೋಕ್ಲುಸಮೀಪದ ಹೊದವಾಡ ಗ್ರಾಮದ ನಿವಾಸಿ ಬಿ.ಬಿ.ದರ್ನಪ್ಪ ಎಂಬವರ ದನದ ಕೊಟ್ಟಿಗೆ ಮಳೆ ಗಾಳಿಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.
ಹೊದ್ದೂರು ಗ್ರಾಮ ಪಂಚಾಯತಿಯ ಕುಂಬಳದಾಳು ಗ್ರಾಮದ ನಿವಾಸಿ ಕಲ್ಲೆಂಗಡ ಗಿರೀಶ್ ಎಂಬುವರ ತೋಟದ ಲೈನ್ ಮನೆಯ ಮೇಲೆ ಸೋಮವಾರ ರಾತ್ರಿ ಭಾರಿ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ.
ನಾಪೋಕ್ಲು ಸಮೀಪದ ಕುಂಜಿಲ ಗ್ರಾಮದ ನಿವಾಸಿ ಕೆ.ಎಂ ಮರಿಯಮ್ಮ ರವರ ವಾಸದ ಮನೆ ಗೋಡೆ ಕುಸಿದು ಹಾನಿ ಸಂಭವಿಸಿದೆ.