ಮಡಿಕೇರಿ: ತಾಲ್ಲೂಕಿನ ತಲಕಾವೇರಿಯಲ್ಲಿ ಅ.17ರಂದು ಮಧ್ಯಾಹ್ನ 1.44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ‘ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ನಡೆಯಲಿದೆ.

ಇದಕ್ಕೂ ಮುನ್ನ ಭಾಗಮಂಡಲದ ಭಗಂಡೇಶ್ವರ ದೇಗುಲದಲ್ಲಿ ಸೆ. 26ರಂದು ಬೆಳಿಗ್ಗೆ 9.31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ. 4ರಂದು ಬೆಳಿಗ್ಗೆ 8.33ಕ್ಕೆ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ. 14ರಂದು ಬೆಳಿಗ್ಗೆ 11.45ಕ್ಕೆ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.45ಕ್ಕೆ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿ ಇಡುವ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಸೇರಿದ ಭಗಂಡೇಶ್ವರ–ತಲಕಾವೇರಿ ದೇವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.