ಮಡಿಕೇರಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಲ್ಲೂ ಮೇ 5ರಿಂದ ಸಮೀಕ್ಷಾ ಕಾರ್ಯ ಆರಂಭವಾಗಲಿದೆ.

ಮೇ 5ರಿಂದ 17ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಮೇ 19ರಿಂದ 21ರವರೆಗೆ ಸಮೀಕ್ಷೆ ಬ್ಲಾಕ್ಗಳಲ್ಲಿ ವಿಶೇಷ ಶಿಬಿರ ಕೈಗೊಂಡು ಮನೆ ಮನೆ ಭೇಟಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿಗಳ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.

ಈ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಕಾರ್ಯಾಗಾರ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ‘ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

‘ಮಾಸ್ಟರ್ ಟ್ರೈನರ್ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ನೀಡುವ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ’ ಎಂದು ಹೇಳಿದರು.

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಅತಿಮುಖ್ಯ ಕಾರ್ಯದಲ್ಲಿ ಒಂದಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಯು ವೈಜ್ಞಾನಿಕ ಮತ್ತು ವಸ್ತುನಿಷ್ಠವಾಗಿ ಸಮೀಕ್ಷೆ ಮಾಡಬೇಕು. ಸಂಶಯಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಬೇಕು’ ಎಂದು ಸೂಚಿಸಿದರು.

ಮಾಸ್ಟರ್ ತರಬೇತಿದಾರ ಪ್ರಶಾಂತ್ ಮಾತನಾಡಿ, ‘ಮೊಬೈಲ್ ಅಪ್ಲಿಕೇಶನ್ನಲ್ಲಿ ಮಾಹಿತಿ ತುಂಬುವ ವಿಧಾನ, ಜಾತಿ, ಮೂಲ ಜಾತಿ, ಉಪ ಜಾತಿ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ ಸಂಖ್ಯೆ, ಕುಟುಂಬದ ಮುಖ್ಯಸ್ಥರ ಮತ್ತು ಸದಸ್ಯರ ಹೆಸರು, ಲಿಂಗ, ವಯಸ್ಸು, ಆಧಾರ್ ಕಾರ್ಡ್ ಸಂಖ್ಯೆ, ಶಿಕ್ಷಣ, ವಿದ್ಯಾಭ್ಯಾಸ, ವೃತ್ತಿ, ಕುಟುಂಬದ ಕುಲಕಸುಬು, ಆಸ್ತಿವಿವರ, ಕೃಷಿ, ಕುಟುಂಬದ ಆದಾಯ, ಉದ್ಯೋಗ, ಹೀಗೆ ಹಲವು ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ನಲ್ಲಿ ತುಂಬಬೇಕಿದೆ’ ಎಂದು ಮಾಹಿತಿ ನೀಡಿದರು.

Highlights - ಮೇ 5ರಿಂದ 17ರವರೆಗೆ ನಡೆಯಲಿದೆ ಮನೆ, ಮನೆ ಸಮೀಕ್ಷೆ ಮೇ 19ರಿಂದ 21ರವರೆಗೆ ಬ್ಲಾಕ್ಗಳಲ್ಲಿ ವಿಶೇಷ ಶಿಬಿರ ಮೇ 2ರಂದು ಗಣತಿದಾರರ ಹಂತದಲ್ಲಿ ತರಬೇತಿ

Cut-off box - ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ: ಎಡಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮೀಕ್ಷೆ ಕೈಗೊಳ್ಳಲಾಗಿದ್ದು ಮೊಬೈಲ್ ಆ್ಯಪ್ ಆಧಾರದಲ್ಲಿ ಮನೆ ಮನೆ ಸಮೀಕ್ಷೆ ಮಾಡಬೇಕಿದೆ’ ಎಂದು ತಿಳಿಸಿದರು. ‘ಜಿಲ್ಲೆಯ 544 ಮತಗಟ್ಟೆ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯಲಿದ್ದು ತಾಲ್ಲೂಕು ಸಂಪನ್ಮೂಲ ತರಬೇತಿ ಅಧಿಕಾರಿಗಳು ಸಮೀಕ್ಷೆ ಮಾಡುವವರಿಗೆ ಸರಿಯಾದ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

Cut-off box - ಮುಖಂಡರ ಜೊತೆ ಸಭೆ ಇಂದು: ಶೇಖರ್ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ ‘ಪರಿಶಿಷ್ಟ ಜಾತಿ ಮುಖಂಡರ ಜೊತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಏ.29ರಂದು ಸಭೆ ನಡೆಯಲಿದ್ದು ಪರಿಶಿಷ್ಟ ಜಾತಿಗಳ ಸಮಾಜದವರು ಸ್ವಯಂಪ್ರೇರಣೆಯಿಂದ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದು’ ಎಂದು ಹೇಳಿದರು. ‘ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ಎಸ್ಜಿಎಸ್ವೈ ಸಭಾಂಗಣದಲ್ಲಿ ಸೋಮವಾರಪೇಟೆಯ ಅಂಬೇಡ್ಕರ್ ಭವನ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11 ಹಾಗೂ ಕುಶಾಲನಗರದ ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ತಹಶೀಲ್ದಾರರ ನೇತೃತ್ವದಲ್ಲಿ ಮಾಹಿತಿ ನೀಡಲಾಗುತ್ತದೆ’ ಎಂದು ತಿಳಿಸಿದರು.’ ‘ಮೇ 2ರಂದು ಗಣತಿದಾರರ ಹಂತದಲ್ಲಿ ತರಬೇತಿ ನಡೆಯಲಿದೆ. ತರಬೇತಿಗೆ ನಿಯೋಜನೆಗೆ ಆಗಿರುವ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.