ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: ಗರ್ಭಕಂಠದ ಕ್ಯಾನ್ಸರ್ ಮಾಹಿತಿ ಕಾರ್ಯಾಗಾರ

Published : 12 ಸೆಪ್ಟೆಂಬರ್ 2024, 13:46 IST
Last Updated : 12 ಸೆಪ್ಟೆಂಬರ್ 2024, 13:46 IST
ಫಾಲೋ ಮಾಡಿ
Comments

ಸೋಮವಾರಪೇಟೆ: ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್‌ನಿಂದ ಇಲ್ಲಿನ ಒಕ್ಕಲಿಗರ ಸಂಘದ ಶ್ರೀಗಂಧ ಸಭಾಂಗಣದಲ್ಲಿ ಈಚೆಗೆ ಗರ್ಭಕಂಠ ಕ್ಯಾನ್ಸರ್ ಕುರಿತ ಮಾಹಿತಿ ಕಾರ್ಯಾಗಾರ ನಡೆಯಿತು.

ಸಾಯಿ ಆಸ್ಪತ್ರೆಯ ವೈದ್ಯಾಧಿಕಾರಿ ಇಮಾನಿ ಮಾತನಾಡಿ, ‘ಗರ್ಭಕಂಠದ ನಿಯತಕಾಲಿಕ ತಪಾಸಣೆ ಮತ್ತು ಎಚ್‌ಪಿವಿ ಸೋಂಕಿನ ವಿರುದ್ಧ ವ್ಯಾಕ್ಸಿನೇಷನ್ ಮಾಡಿಸುವುದು ಈ ಕ್ಯಾನ್ಸರ್ ಅನ್ನು ತಡೆಗಟ್ಟಲು ಸಹಕಾರಿ’ ಎಂದರು.

ರೋಗದ ಅರಂಭಿಕ ಹಂತ, ಲಕ್ಷಣಗಳು, ಅಪಾಯಕಾರಿ ಅಂಶಗಳು, ಚಿಕಿತ್ಸಾ ವಿವರಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕ್ಲಬ್ ಸದಸ್ಯೆ, ಶಿಕ್ಷಕಿ ಚಂದ್ರಕಲಾ ಬೋಜರಾಜ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕ್ಲಬ್ ಅಧ್ಯಕ್ಷೆ ಸಂಗೀತಾ ದಿನೇಶ್, ಕಾರ್ಯದರ್ಶಿ ಸುಮಲತಾ ಪುರುಷೋತ್ತಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT