ಕುಶಾಲನಗರ: ಹೆಬ್ಬಾಲೆಯಲ್ಲಿ ಚೆಸ್ಕಾಂ ನೂತನ ಶಾಖಾ ಕಚೇರಿ ತೆರಯುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಮುಳ್ಳುಸೋಗೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಗೃಹ ಜ್ಯೋತಿ ಯೋಜನೆ ವಿಷಯಗಳ ಪ್ರಸ್ತಾವನೆಯ ಸಂದರ್ಭದಲ್ಲಿ ಹೆಬ್ಬಾಲೆಯಲ್ಲಿ ನೂತನ ಚೆಸ್ಕಾಂ ವಿದ್ಯುತ್ ಶಾಖಾ ಕಚೇರಿ ತೆರೆದು ಗ್ರಾಮಾಂತರ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದ ಇಲಾಖೆಯ ವ್ಯವಸ್ಥಾಪಕರಿಗೆ ಪತ್ರವ್ಯವಹಾರ ನಡೆಸುವ ಬಗ್ಗೆ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಬಿ.ಪಿ.ಶಶಿಧರ್ ಮಾತಾನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಯೋಜನೆಗಳನ್ನು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮೊದಲಿಗೆ ಹಿಂದಿನ ಪ್ರಗತಿ ಪರಿಶೀಲನೆ ಸಭೆಯ ಅನುಷ್ಠಾನ ವರದಿಯನ್ನು ಓದಲಾಯಿತು. ಹಿಂದಿನ ಅನುಪಾಲನಾ ವರದಿಗಳ ಬಗ್ಗೆ ಸವಿಸ್ತಾರ ಚರ್ಚೆಗಳು ನಡೆದವು.

ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣಗೌಡ , ಶ್ರೀನಿವಾಸನ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಮುಸ್ತಫಾ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀದೇವಿ, ವಿದ್ಯುತ್ ಇಲಾಖೆಯ ಎಂಜಿನಿಯರ್ ರಾಣಿ, ಸಾರಿಗೆ ಇಲಾಖೆ ಅಧಿಕಾರಿ ನಾಗಮಲ್ಲೇಶ್, ಅಶೋಕ್, ಉದ್ಯೋಗ ವಿನಿಮಯ ಇಲಾಖೆ ಅಧಿಕಾರಿ ಮಂಜುನಾಥ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.