ವಿರಾಜಪೇಟೆ: ‘ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಪದವಿ ಪೂರ್ವ ಶಿಕ್ಷಣದ ಜೊತೆಜೊತೆಗೆ ಪ್ರಾರಂಭದಲ್ಲಿಯೇ ಸಿಇಟಿ, ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೂಡ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಹೇಳಿದರು.

ಪಟ್ಟಣದ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಹಾಗೂ ಚಾಣಕ್ಯ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ರಚಿಸಿರುವ ಸಿಇಟಿ, ಜೆಇಇ ಹಾಗೂ ನೀಟ್ ತರಬೇತಿ ಪುಸ್ತಕಗಳನ್ನು ಕಾಲೇಜಿನಲ್ಲಿ ಗುರುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆರಂಭದಲ್ಲಿಯೇ ತಯಾರಾಗುವುದರಿಂದ ಆಯಾ ವಿಷಯಗಳಲ್ಲಿ ಆಳವಾದ ಜ್ಞಾನವನ್ನು ಪಡೆಯುವ ಮೂಲಕ ಮಂಡಳಿಯ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತದೆ. ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಸಿದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಹಿಂದುಳಿದಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆರಂಭದಲ್ಲಿಯೇ ತಯಾರಾಗುವುದರಿಂದ ಆಯಾ ವಿಷಯಗಳಲ್ಲಿ ಆಳವಾದ ಜ್ಞಾನವನ್ನು ಪಡೆಯುವ ಮೂಲಕ ಮಂಡಳಿಯ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತದೆ
ರೆ.ಫಾ. ಮದಲೈ ಮುತ್ತು, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ

ಚಾಣಕ್ಯ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷೆ ಕವಿತಾ, ಕಾಲೇಜಿನ ಉಪನ್ಯಾಸಕರಾದ ವಿವೇಕ್, ಹೇಮಂತ್, ಕೃಷ್ಣರಾಜ್, ರಾಜ ರೈ, ಜಹೀರ್ ಸಾಗರ್, ರಶ್ಮಿ, ಮೋಹನಾಕ್ಷಿ, ಕ್ರಿಸ್ಟಿನಾ, ಅಶ್ವಿನಿ, ರಮ್ಯ, ತೀರ್ಥ, ಮೋನಿಕಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.