ಗೋಣಿಕೊಪ್ಪಲು: ‘ಕೊಡವ ಜನಾಂಗದ ಹಲವರು ಸೇನೆ, ಕ್ರೀಡೆ, ರಾಜಕೀಯ, ನ್ಯಾಯಾಲಯದ ಮೊದಲಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದರಿಂದ ಇಂದು ಜಗತ್ತು ಜನಾಂಗವನ್ನು ಗುರುತಿಸುವಂತಾಗಿದೆ’ ಎಂದು ಶಾಸಕ ಎ.ಎಸ್.ಪೊನ್ನಣ್ಣ ಅಭಿಮಾನದಿಂದ ಹೇಳಿದರು.

ಟಿ.ಶೆಟ್ಟಿಗೇರಿ ಕೊಡವ ಸಮಾಜದ ಚಂಗ್ರಾಂದಿ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,
‘ಹಿರಿಯರ ಒಳ್ಳೆಯ ಗುಣ, ಸತ್ಯ, ಧರ್ಮ, ನ್ಯಾಯ, ಪ್ರಾಮಾಣಿಕತೆ ಮೂಲಕ ನಾವು ಹೆಸರು ಗಳಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿಯ ವ್ಯವಸ್ಥೆಯ ಪಾತ್ರ ಬಹಳ ದೊಡ್ಡದಿದೆ. ಶೈಕ್ಷಣಿಕವಾಗಿ ಮುಂದುವರಿದಿರುವ ಕೊಡವ ಜನಾಂಗ ಸಾಧನೆಯಲ್ಲಿ ಜಾತಿಯನ್ನು ಮೀರಿ ನಿಂತಿರುವುದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.

‘ಕೊಡವರ ಹಬ್ಬ, ಆಚಾರ, ವಿಚಾರ, ಸಂಸ್ಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. 32 ಕೊಡವ ಸಮಾಜಗಳು ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ಟಿ.ಶೆಟ್ಟಿಗೇರಿ ಕೊಡವ ಸಮಾಜ ಜನಾಂಗ ಹೆಮ್ಮೆಪಡುವಂತಹ ಜವಾಬ್ದಾರಿಯುತವಾದ ಸೇವೆಯನ್ನು ಮಾಡುತ್ತಿದೆ’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಕೀಲರಾದ ಪಟ್ಟಡ ರೀನಾ ಪ್ರಕಾಶ್ ಮಾತನಾಡಿ, ‘ಟಿ.ಶೆಟ್ಟಿಗೇರಿ ಕೊಡವ ಸಮಾಜ ಕಾವೇರಿ ಚಂಗ್ರಾಂದಿ ಹಬ್ಬವನ್ನು 10 ದಿನದವರೆಗೆ ಜನೋತ್ಸವವಾಗಿ ಮಾಡುತ್ತಿರುವುದು ಶ್ಲಾಘನೀಯ. ಕೊಡವ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡುವುದು ಅಷ್ಟೇ ಮುಖ್ಯವಾಗಿದೆ’ ಎಂದು ತಿಳಿಸಿದರು.

ಜನಾಂಗದವರ ಪ್ರೋತ್ಸಾಹಕ್ಕೆ ಬಹುಮಾನ: ಸಮಾಜದ ಅಧ್ಯಕ್ಷ ಕೈಬುಲಿರ ಹರೀಶ್ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಕೊಡವ ಜನಾಂಗವನ್ನು ವೃದ್ಧಿಸುವ ನಿಟ್ಟಿನಲ್ಲಿ ಟಿ.ಶೆಟ್ಟಿಗೇರಿ ಕೊಡವ ಸಮಾಜದ ವ್ಯಾಪ್ತಿಯಲ್ಲಿ ಬರುವ ಕೊಡವ ದಂಪತಿಗೆ 3ನೇ ಮಗುವಾದರೆ ₹ 50 ಸಾವಿರ, 4ನೇ ಮಗುವಾದರೆ ₹ 1ಲಕ್ಷ ನಗದು ಬಹುಮಾನ ನೀಡುವ ನಿರ್ಣಯವನ್ನು ಕೈಗೊಳ್ಳಲಾಯಿತು. ಈ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು. ಮಗುವಿಗೆ 18 ವಯಸ್ಸು ತುಂಬಿದ ಬಳಿಕ ತೆಗೆದುಕೊಳ್ಳಬಹುದು ಎಂದು ನಿರ್ಧರಿಸಲಾಯಿತು.

ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕ ಪ್ರಶಸ್ತಿ ಪುರಸ್ಕೃತೆ ಕೈಬುಲಿರ ಪಾರ್ವತಿ ಬೋಪಯ್ಯ, ದಾನಿಗಳಾದ ಅಜ್ಜಮಾಡ ವೇಣು ಸುಬ್ಬಯ್ಯ, ಅಜ್ಜಮಾಡ ಲವ ಕುಶಾಲಪ್ಪ, ಅಜ್ಜಮಾಡ ಪ್ರಮೀಳಾ ಕರುಂಬಯ್ಯ, ಅಜ್ಜಮಾಡ ಚಿಮ್ಮ ತಿಮ್ಮಯ್ಯ ಹಾಗೂ ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ, ನಿರ್ದೇಶಕಿ ಚಂಗುಲಂಡ ಅಶ್ವಿನಿ ಸತೀಶ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ರೂಟ್ಸ್ ಶಾಲೆಯ ಮುಖ್ಯಶಿಕ್ಷಕಿ ನೆಲ್ಲೀರ ಪೂರ್ಣಿಮಾ, ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ, ಚೆಟ್ಟಂಡ ಲತಾ ಚರ್ಮಣ, ಬಾದುಮಂಡ ವಿಷ್ಣು ಕಾರ್ಯಪ್ಪ, ಚಂಗುಲಂಡ ಅಶ್ವಿನಿ ಸತೀಶ್, ಮಚ್ಚಮಾಡ ಸುಮಂತ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.