ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮೀಣ ಭಾಗಗಳು ಸೇರಿದಂತೆ ಹಲವೆಡೆಗಳಲ್ಲಿ ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಮುಂದುವರೆಯಬೇಕಿದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಶುಕ್ರವಾರ ಸಾಮೂಹಿಕ ನವಗ್ರಹ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ದೇವಾಲಯ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಹಣಕಾಸಿನ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.

ಬೆಳಿಗ್ಗೆ ವಿವಿಧ ಪೂಜಾ ಕಾರ್ಯಗಳ ನಡೆದವು. ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಐಗೂರು ಮುತ್ತಪ್ಪ ಸ್ವಾಮಿ ದೇವಾಲಯಕ್ಕೆ ₹ 2 ಲಕ್ಷ, ಹರಿಹರ ಯುವಕ ಮಂಡಲದ ಸಮುದಾಯ ಭವನಕ್ಕೆ ₹ 2 ಲಕ್ಷ, ಯಡೂರು ಸಮುದಾಯ ಭವನಕ್ಕೆ ₹ 1.50 ಲಕ್ಷ ಅನುದಾನ ಹಾಗೂ ಗರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಗ್ರಾಮಕ್ಕೆ ಸಿಲಿಕಾನ್ ಚೇಂಬರ್ ನಿರ್ಮಾಣಕ್ಕೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ವಹಿಸಿದ್ದರು. ವೇದಿಕೆಯಲ್ಲಿ ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಸಬಿತಾ ಚನ್ನಕೇಶವ, ನಿವೃತ್ತ ಉಪನ್ಯಾಸಕ ಡಿ.ಎಸ್.ಚಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಪಿ.ದಿನೇಶ್, ಲಿಂಗೇರಿ ರಾಜೇಶ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ರೋಹಿತ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.