ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾಮದಲ್ಲಿ ಮಂಗಳವಾರ ನಡೆದ ಲೆವಿಸ್ಟಾ ಕೊಡವ ಕೌಟುಂಬಿಕ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ದ್ವಿತೀಯ ಸ್ಥಾನ ಪಡೆದ ಕುಲ್ಲೇಟಿರ ತಂಡ
ಕ್ರೀಡಾಂಗಣದಲ್ಲಿ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು
ಸಮಾರೋಪ ಸಮಾರಂಭವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು

ಜಿಲ್ಲೆಯ ಜನರ ದೇಶಪ್ರೇಮ ಕ್ರೀಡಾಸ್ಫೂರ್ತಿ ಮಾದರಿಯಾಗಿದೆ. ಮುಂದಿನ ದಿನಗಳಲ್ಲೂ ಕ್ರೀಡಾಕೂಟಗಳಿಗೆ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಎಸ್‌ಎಲ್‌ಎನ್ ಗ್ರೂಪ್ ಸಂಪೂರ್ಣ ಸಹಕಾರ ನೀಡಲಿದೆ.
ವೆಂಕಟಾಚಲಂ ಸಾತಪ್ಪನ್, ಎಸ್‌ಎಲ್‌ಎನ್ ಗ್ರೂಪ್‌ನ ವ್ಯವಹಾರಿಕ ಮುಖ್ಯಸ್ಥ.
ಕೊಡವ ಹಾಕಿ ಅಕಾಡೆಮಿಯಿಂದ ನಡೆದ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ' ಯಶಸ್ವಿಯಾಗಿದೆ. ಹಾಕಿ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ಅಕಾಡೆಮಿ ಮುಂದೆ ರೂಪಿಸಲಿದೆ.
ಪಾಂಡಂಡ ಕೆ.ಬೋಪಣ್ಣ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ.