ಮಂಗಳವಾರ, ಸೆಪ್ಟೆಂಬರ್ 21, 2021
26 °C

ಕುಶಾಲನಗರ | ಸಕಾಲದಲ್ಲಿ ಸಿಗದ ಚಿಕಿತ್ಸೆ; ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಶಾಲನಗರ: ಲಾಕ್‌ಡೌನ್‌ನಿಂದಾಗಿ ಸಕಾಲದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಆಗದ ಕಾರಣ ಮಾವಿನಹಳ್ಳ ಗ್ರಾಮದಲ್ಲಿ ಎರಡೂವರೆ ತಿಂಗಳ ಗಂಡು ಮಗು ಮೃತಪಟ್ಟಿದೆ.

ಗ್ರಾಮದ ಪ್ರತೀಶ್ ಹಾಗೂ ಲೀಲಾ ದಂಪತಿ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತಿತ್ತು. ಪೊಲೀಸರ ಭಯದಿಂದ ಆಸ್ಪತ್ರೆಗೆ ಕರೆದೊಯ್ಯಲು ಆಟೊ ಚಾಲಕರೂ ಬರಲಿಲ್ಲ.

ನಂತರ ಯುವಕನೊಬ್ಬರ ನೆರವಿನಲ್ಲಿ ಕಾರಿನಲ್ಲಿ ಹೆಬ್ಬಾಲೆಗೆ ಕರೆ ತಂದರು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಅಲ್ಲಿ ಕುಶಾಲನಗರಕ್ಕೆ ಕರೆದೊಯ್ದರು. ಬಳಿಕ ಮೈಸೂರಿಗೆ ತಂದು, ಆಸ್ಪತ್ರೆಗೆ ದಾಖಲಿಸಿದ್ದರು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿತು.

ಭಾನುವಾರ ಮಧ್ಯಾಹ್ನ ಮಗುವಿನ ಅಂತ್ಯಕ್ರಿಯೆಯನ್ನು ಮಾವಿನಹಳ್ಳದಲ್ಲಿ ನಡೆಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು