ಕುಶಾಲನಗರ: ಸಮೀಪದ ಕೂಡಿಗೆ ಶಾಲಾ ಮೈದಾನದಲ್ಲಿ ಸಂಜೆ ನಂತರ ಕಿಡಿಗೇಡಿಗಳು ಮದ್ಯಪಾನ, ಧೂಮಪಾನ ಮಾಡುತ್ತಾರೆ ಎಂದು ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ದೂರಿದರು.

ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಕೂಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ ಅಧಿಕಾರಿಗಳ ಗಮನ ಸೆಳೆಯಿತು.

ಶಾಲೆಗೆ ಶೌಚಾಲಯ ಒದಗಿಸಿ, ಶಾಲೆಯ ಬಾಗಿಲು ದುರಸ್ತಿಗೊಳಿಸಿ, ಶಾಲೆಗೆ ಆಟದ ಮೈದಾನ ಕಲ್ಪಿಸಿ, ನಮ್ಮ ಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಿ, ಕಂಪ್ಯೂಟರ್ ಶಿಕ್ಷಣ ಕೊಡಿಸಿ ಮತ್ತು ಕಂಪ್ಯೂಟರ್ ಶಿಕ್ಷಕರನ್ನು ನೇಮಿಸಿ, ಸರ್ಕಾರಿ ಶಾಲೆಯ ಜಾಗವನ್ನು ರಕ್ಷಿಸಿ... ಹೀಗೆ ಸರ್ಕಾರಿ ಶಾಲೆಗಳಲ್ಲಿರುವ ನಾನಾ ಸಮಸ್ಯೆಗಳನ್ನು ವಿವಿಧ ಶಾಲೆ ಮಕ್ಕಳಾದ ಗಗನ್ ಚಿನ್ಮಯಿ, ನಮ್ರತಾ, ನಿಶ್ಚಿತಾ, ಭೂಮಿಕಾ, ವರ್ಷಾ, ಸಿಂಚನ, ಯಶ್ವಿನಿ, ಜೀವನ್, ಸಂಜನ್ ಹೇಳಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಅವರು ಸಮಸ್ಯೆಗಳನ್ನು ಆಲಿಸಿ ಮಾತನಾಡಿ, ನಮ್ಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಸಮಸ್ಯೆಗಳನ್ನು ಅನುದಾನದ ಲಭ್ಯತೆಗನುಗುಣವಾಗಿ ತ್ವರಿತಗತಿಯಲ್ಲಿ ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಆರ್. ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಗ್ರಾಮಸಭೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲು ಸಾಧ್ಯ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಧ್ಯವಾಗುತ್ತದೆ. ಮಕ್ಕಳು ಈ ಸಭೆಯಲ್ಲಿ ಉತ್ತಮವಾಗಿ ವಿಷಯ ಮಂಡಿಸಿರುವುದನ್ನು ಶ್ಲಾಘನೀಯ ಎಂದರು.

ಸಂಪನ್ಮೂಲ ವ್ಯಕ್ತಿ ಕೆ.ಶಾಂತಕುಮಾರ್, ಮಕ್ಕಳ ಹಕ್ಕುಗಳ ಮತ್ತು ಕರ್ತವ್ಯ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಕುಂದುಕೊರತೆಗಳನ್ನು ಮಕ್ಕಳ ಗ್ರಾಮಸಭೆಯ ಮೂಲಕ ಪರಿಹರಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ನೀಡಲಾಗಿದೆ ಎಂದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಫಿಲೋಮಿನಾ, ಸುರೇಶ್, ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂದೀಶ್, ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತಾ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪಾವಿತ್ರ, ಚಿಕ್ಕತ್ತೂರು ಶಾಲೆಯ ಮುಖ್ಯ ಶಿಕ್ಷಕ ಎಚ್.ಎಸ್.ಪ್ರಕಾಶ್, ಶಿಕ್ಷಕ ಉದಯಪ್ರಕಾಶ್, ದೊಡ್ಡತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಿಕಾ, ಹುಲುಸೆ ಬಸವರಾಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.