ಗೋಣಿಕೊಪ್ಪಲು: ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತ ಧರ್ಮದವರು ನೀಡಿದ ಕೊಡುಗೆ ಅನನ್ಯವಾದುದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ದಕ್ಷಿಣ ಕೊಡಗು ಕ್ರಿಸ್ಚಿಯನ್ ಅಸೋಸಿಯೇಷನ್ ವತಿಯಿಂದ ಭಾನುವಾರ ಪಟ್ಟಣದ ಪರಿಮಳ ಮಂಗಳವಿಹಾರದಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಮಾತನಾಡಿದ ಅವರು ಸಾಮಾಜಿಕ ಕ್ಷೇತ್ರದಲ್ಲಿಯೂ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದೆ. ಶಾಂತಿ, ಸೌಹಾರ್ದ ಬಯಸುವ ಈ ಸಮುದಾಯದ ತತ್ವ ಆದರ್ಶಗಳು ಅನುಕರಣೀಯವಾದುದು ಎಂದು ಹೇಳಿದರು.

ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನೀಡುವ ಅನುದಾನದ ಜತೆಗೆ ಶಾಸಕರ ನಿಧಿಯಿಂದಲೂ ಅನುದಾನ ನೀಡಲಾಗಿದೆ. ಸಮುದಾಯದ ವಿವಿಧ ಕಾಮಗಾರಿಗಳಿಗೆ ಈಗಾಗಲೆ ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಮುಂದೆಯೂ ಕೂಡ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ದಕ್ಷಿಣ ಕೊಡಗಿನ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು, ಧರ್ಮಗುರು ಕನ್ಯಾಶ್ರೀ ಹಾಜರಿದ್ದರು. ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.