ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಭಟನೆಗೆ ಸಿಐಟಿಯು ಬೆಂಬಲ

Published 30 ಮೇ 2024, 6:21 IST
Last Updated 30 ಮೇ 2024, 6:21 IST
ಅಕ್ಷರ ಗಾತ್ರ

ಮಡಿಕೇರಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ ಮೇ 30ರಂದು ಹಮ್ಮಿಕೊಂಡಿರುವ ‘ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ’ ಬೃಹತ್‌ ಪ್ರತಿಭಟನಾ ಮೆರವಣಿಗೆಗೆ ಕೊಡಗು ಜಿಲ್ಲಾ ಸಿಐಟಿಯು ಸಂಘಟನೆ ಬೆಂಬಲ ನೀಡಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆ‌ರ್.ಭರತ್ ಹೇಳಿದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರವಾದ ಆರೋಪಗಳು ಕೇಳಿ ಬಂದಿವೆ. ಆದಿವಾಸಿಗಳು, ಅಮಾಯಕರು ಯಾವುದೇ ದೊಡ್ಡ ತಪ್ಪು ಮಾಡದಿದ್ದರೂ, ತಕ್ಷಣ ಬಂಧಿಸುವ ಆಡಳಿತ ವ್ಯವಸ್ಥೆ ಪ್ರಜ್ವಲ್ ಅವರ ವಿರುದ್ಧ ಗಂಭೀರ ಆರೋಪಗಳಿದ್ದರೂ, ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಿದೆ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ಪಾಳೇಗಾರಿಕೆ, ಮಿತಿ ಮೀರಿದ ಆದಾಯ ಗಳಿಕೆ ಮತ್ತು ಕುಟುಂಬ ರಾಜಕಾರಣದ ದರ್ಪ ಮುಂದುರೆದಿದೆ. ರಾಜಕೀಯ ಪ್ರಭಾವ ಹಾಗೂ ಹಣಬಲ ಪ್ರಜ್ವಲ್ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದರು. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದ ಅಸಮಾಧಾನ ವ್ಯಕ್ತಪಡಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಖಜಾಂಚಿ ಎನ್.ಡಿ.ಕುಟ್ಟಪ್ಪ ಭಾಗಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT