ಶನಿವಾರಸಂತೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹಾಗೂ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರಿನಲ್ಲಿ ಮತದಾನ ಮುಗಿದ ನಂತರ ಲಘು ಘರ್ಷಣೆಗಳು ಸಂಭವಿಸಿದ್ದು, ಇಬ್ಬರಿಗೆ ಗಾಯಗಳಾಗಿವೆ.

ಶನಿವಾರಸಂತೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ನಡೆದ ಜಟಾಪಟಿಯಲ್ಲಿ ಉಭಯ ಪಕ್ಷಗಳ ಒಬ್ಬೊಬ್ಬ ಕಾರ್ಯಕರ್ತರಿಗೆ ಲಘು ಪ್ರಮಾಣದ ಗಾಯಗಳಾಗಿವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕೂಡುಮಂಗಳೂರಿನಲ್ಲಿ ಮತದಾನದ ನಂತರ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಎಲ್ಲರನ್ನೂ ಚದುರಿಸಿದರು. ಈ ಕುರಿತು ಪ್ರಕರಣಗಳು ದಾಖಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.