ಕುಶಾಲನಗರ: ‘ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.
ಗೌರಿ- ಗಣೇಶೋತ್ಸವ ಆಚರಣೆ ಅಂಗವಾಗಿ ‘ನಮ್ಮ ನಡೆ ಹಸಿರೆಡೆಗೆ’ ಅಭಿಯಾನದಡಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಪರಿಸರ ಜನಜಾಗೃತಿ ಆಂದೋಲನದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದರು.
‘ಗಣೇಶೋತ್ಸವ ಸಂದರ್ಭದಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರು ಮಾಡಿದ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.
ಶಾಲೆಯ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ ಮಾತನಾಡಿ, ‘ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ ಮತ್ತು ಬಿ.ಎಸ್.ಅನ್ಸಿಲಾ ರೇಖಾ ಮಕ್ಕಳಿಗೆ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಗೆ ಸಹಕರಿಸಿದರು.
ನಂತರ ಕೂಡ್ಲೂರು ಗ್ರಾಮದಲ್ಲಿ ಪರಿಸರ ಜಾಥಾ ನಡೆಸಿ ಜನರಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಿದರು.
ಕುಶಾಲನಗರ: ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.
ಗೌರಿ- ಗಣೇಶೋತ್ಸವ ಆಚರಣೆ ಅಂಗವಾಗಿ ‘ನಮ್ಮ ನಡೆ ಹಸಿರೆಡೆಗೆ’ ಅಭಿಯಾನದಡಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಪರಿಸರ ಜನಜಾಗೃತಿ ಆಂದೋಲನದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದರು. ಗಣೇಶೋತ್ಸವ ಸಂದರ್ಭದಲ್ಲಿ ಪಿಓಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರು ಮಾಡಿದ ಗಣೇಶ ಮೂರ್ತಿ ಪ್ರತಿಷ್ಠಾಪಿಸದೆ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ ಮತ್ತು ಬಿ.ಎಸ್.ಅನ್ಸಿಲಾ ರೇಖಾ ಮಕ್ಕಳಿಗೆ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಗೆ ಸಹಕರಿಸಿದರು. ನಂತರ ಕೂಡ್ಲೂರು ಗ್ರಾಮದಲ್ಲಿ ಪರಿಸರ ಜಾಥಾ ನಡೆಸಿ ಜನರಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.