ಮಡಿಕೇರಿ: ಅ. 15ರಂದು ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ‘ಸ್ವಚ್ಛ ಕೊಡಗು - ಸುಂದರ ಕೊಡಗು’ ಅಭಿಯಾನ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದೆ.

ಈ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದೆ ಎಂದು ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ.

ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ನೇತೖತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಕೊಡಗು ಚೇಂಬರ್ ಆಫ್ ಕಾಮರ್ಸ್, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ, ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ.

ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬೆಳಿಗ್ಗೆ 8 ಗಂಟೆಗೆ ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಚಾಲನೆ ನೀಡಲಿದ್ದಾರೆ.

ಗೋಣಿಕೊಪ್ಪಲಿನಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಕುಶಾಲನಗರದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ವಿರಾಜಪೇಟೆಯಲ್ಲಿ ಸರ್ಕಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ಸೋಮವಾರಪೇಟೆಯಲ್ಲಿ ತಾಲ್ಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಮತ್ತು ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಎಸ್.ಸುಂದರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಆಯಾ ತಾಲೂಕು ಕೇಂದ್ರಗಳು, ಸ್ಥಳೀಯ ಸಂಸ್ಥೆಗಳು, ಗ್ರಾಮಪಂಚಾಯತ್ಗಳಲ್ಲಿ ಸ್ಥಳೀಯ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು ಈ ಅಭಿಯಾನ ಆರಂಭಿಸಲಿದ್ದಾರೆ.

ಕೊಡಗು ವಿಶ್ವವಿದ್ಯಾಲಯಕ್ಕೆ ಸೇರಿದ 23 ಕಾಲೇಜುಗಳ 1,500 ಎನ್ಎಸ್ಎಸ್ ವಿದ್ಯಾರ್ಥಿಗಳೂ ತಮ್ಮ ಕಾಲೇಜು ವ್ಯಾಪ್ತಿಯ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಿದ್ದಾರೆ. ಜಿಲ್ಲೆಯ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬಹುದಾಗಿದೆ.

ಕೆಡಿಸಿಸಿ ಬ್ಯಾಂಕ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳ ಅಧಿಕಾರಿ, ಸಿಬ್ಬಂದಿಗಳೂ ಸಹಕಾರ ನೀಡುತ್ತಿದ್ದಾರೆ. ವರ್ತಕರು ತಮ್ಮ ಅಂಗಡಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ದಿನೇಶ್ ಕೋರಿದ್ದಾರೆ.

ಜಿಲ್ಲೆಯ ಎಲ್ಲಾ ಸಂಘಸಂಸ್ಥೆಗಳು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ.

ಸಂಗ್ರಹವಾದ ತ್ಯಾಜ್ಯವನ್ನು ಮೈಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ ಎಂದೂ ಮಾಹಿತಿ ನೀಡಿದ್ದಾರೆ.

ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ವೈಯಕ್ತಿಕ ಸುರಕ್ಷತೆ ಬಗ್ಗೆ ಗಮನ ನೀಡಬೇಕು. ರಸ್ತೆಯಲ್ಲಿ ಸಾಗುವ ವಾಹನಗಳ ಬಗ್ಗೆ ಗಮನ ನೀಡಬೇಕು, ಗಾಜು ಸೇರಿದಂತೆ ಅಪಾಯಕಾರಿ ವಸ್ತುಗಳ ಸಂಗ್ರಹಣೆಯಲ್ಲಿ ವೈಯಕ್ತಿಕ ಎಚ್ಚರಿಕೆ ವಹಿಸಿರಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

‘ರಸ್ತೆ ಹೆದ್ದಾರಿ

ಮುಖ್ಯವಾಗಿರಿಸಿಕೊಂಡು ಸ್ವಚ್ಛತೆ’ ಅ. 15 ರಂದು ಸರ್ಕಾರಿ ಕಚೇರಿಗಳ ಅಧಿಕಾರಿ ಸಿಬ್ಬಂದಿಗಳು ಮತ್ತು ಖಾಸಗಿ ಶಾಲಾ ಶಿಕ್ಷಕ ಬೋದಕೇತರ ವರ್ಗ ಬ್ಯಾಂಕ್ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬಹುದು ಎಂದು ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನಸೀರ್ ಅಹಮ್ಮದ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪ್ರಮುಖ ರಸ್ತೆಗಳು ಹೆದ್ದಾರಿಯನ್ನೇ ಮುಖ್ಯವಾಗಿರಿಸಿಕೊಂಡು ಈ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಕೊಡಗು ಸ್ವಚ್ಛತೆ ಸಂಬಂಧಿತ ಮತ್ತಷ್ಟು ಕಾರ್ಯಕ್ರಮ ಆಯೋಜಿಸುವ ಉದ್ದೇಶವಿದೆ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.