ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು | ಪಂಚಾಯಿತಿಯಿಂದ ಸ್ವಚ್ಛತಾ ಕಾರ್ಯ: ಬಟ್ಟೆ ಚೀಲ ಬಳಸಲು ಮನವಿ

Published 13 ಫೆಬ್ರುವರಿ 2024, 15:29 IST
Last Updated 13 ಫೆಬ್ರುವರಿ 2024, 15:29 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ‘ಪವಿ’ ಸ್ವಯಂ ಸೇವಾ ಟ್ರಸ್ಟ್, ಗ್ರಾಮ ಪಂಚಾಯಿತಿ ಹಾಗೂ ಸಂಜೀವಿನಿ ಸ್ವ–ಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ಮಂಗಳವಾರ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ರಸ್ತೆ ಬದಿಯಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಚೀಲದಲ್ಲಿ ತುಂಬಿ ಕಸ ವಿಂಗಡಣಾ ಘಟಕಕ್ಕೆ ಸಾಗಿಸಲಾಯಿತು.

ಈ ಸಂದರ್ಭದಲ್ಲಿ ‘ಪವಿ’ ಸ್ವಯಂ ಸೇವಾ ಸಂಸ್ಥೆಯ ಸಂಚಾಲಕಿ ಅಳಮೇಂಗಡ ಮಾಳವಿಕಾ ಮಾತನಾಡಿ, ‘ಕಸವನ್ನು ಕಂಡ ಕಂಡಲ್ಲಿ ಎಸೆಯದೆ ನಿಗದಿತ ಸ್ಥಳಗಳಲ್ಲಿ ಹಾಕಬೇಕು. ಪ್ಲಾಸ್ಟಿಕ್ ಚೀಲಗಳನ್ನು ಬಳಸಬಾರದು. ಅಂಗಡಿಗಳಲ್ಲಿ ವಸ್ತುಗಳನ್ನು ತರಬೇಕಾದರೆ ಬಟ್ಟೆ ಚೀಲಗಳನ್ನು ತೆಗದುಕೊಂಡು ಹೋಗಬೇಕು. ಸ್ವಚ್ಛತೆ ಬಗ್ಗೆ ಮಕ್ಕಳಲ್ಲಿಯೂ ಅರಿವು ಮೂಡಿಸಬೇಕು. ಸ್ವಚ್ಛತಾ ಅಭಿಯಾನ ಮನೆಯಿಂದಲೇ ಆರಂಭಗೊಳ್ಳಬೇಕು’ ಎಂದು ಹೇಳಿದರು.

ಪಂಚಾಯಿತಿ ಅಧ್ಯಕ್ಷೆ ಅಮ್ಮಣಿ, ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಅಮ್ಮಯ್ಯ,ರಾಜು ಸಂಜೀವಿನಿ ಒಕ್ಕೂಟದ ಪ್ರಮುಖರಾದ ಕವಿತಾ, ಬೊಟ್ಪಂಗಡ ಸೀಮಾ, ಪೊನ್ನಿಮಾಡ ವಾಣಿ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಸ್ವಸಹಾಯ ಸಂಘಗಳ ಮಹಿಳಾ ಮತ್ತು ಪುರುಷ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT