ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ | ಕುಮಾರಲಿಂಗೇಶ್ವರ ದೇವಾಲಯ ಶುಚಿ, ಹಣ್ಣಿನ ಸಸಿ ವಿತರಣೆ

Published : 4 ಸೆಪ್ಟೆಂಬರ್ 2024, 4:29 IST
Last Updated : 4 ಸೆಪ್ಟೆಂಬರ್ 2024, 4:29 IST
ಫಾಲೋ ಮಾಡಿ
Comments

ಸೋಮವಾರಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಸೋಮವಾರಪೇಟೆ ಯೋಜನೆ ವತಿಯಿಂದ ಶಾಂತಳ್ಳಿ ವಲಯದ ಶಾಂತಳ್ಳಿ ಕಾರ್ಯಕ್ಷೇತ್ರದ ಕುಮಾರಲಿಂಗೇಶ್ವರ ದೇವಸ್ಥಾನದಲ್ಲಿ ಪರಿಸರ ಮಾಹಿತಿ ಮತ್ತು ದೇವಸ್ಥಾನದ ಸ್ವಚ್ಛತಾ ಕಾರ್ಯ ಮಂಗಳವಾರ ನಡೆಯಿತು.

ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ಎಸ್.ಜಿ. ಮೇದಪ್ಪ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರು ಪ್ರಗತಿ ಬಂದು ಮತ್ತು ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರಿಗೆ ಹಣ್ಣಿನ ಸಸಿಗಳನ್ನು ವಿತರಣೆ ಮಾಡಿದರು.

ಕುಮಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್, ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಶಾಂತಳ್ಳಿ ಗ್ರಾಮ ಪಂಚಾಯತಿ ಸದಸ್ಯ ಕೆ.ಪಿ. ಚಂಗಪ್ಪ, ಒಕ್ಕೂಟದ ಉಪಾಧ್ಯಕ್ಷ ದಿವ್ಯಕುಮಾರ್, ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಶುಭಾವತಿ ಹಾಗೂ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT