ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನದಿ ತೀರದ ಸ್ವಚ್ಚತೆ: ಸಿಸಿಟಿವಿ ಕ್ಯಾಮೆರಾ ಅಳವಡಿಕೆ

Published 1 ಜೂನ್ 2024, 14:20 IST
Last Updated 1 ಜೂನ್ 2024, 14:20 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳಿಬಾಣೆ ಎಂಬಲ್ಲಿ ಕಾವೇರಿ ನದಿ ತೀರದಲ್ಲಿ ಪಟ್ಟಣದ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದು, ನದಿ ನೀರನ್ನು ಕಲುಷಿತಗೊಳಿಸುತ್ತಿದ್ದಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸದರಿ ಪ್ರದೇಶವನ್ನು ಸ್ವಚ್ಛಗೊಳಿಸಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಯಿತು.

ಪಂಚಾಯಿತಿ ವ್ಯಾಪ್ತಿಯಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು, ರಸ್ತೆ ಬದಿ ಹಾಗೂ ನದಿ ತೀರದಲ್ಲಿ ತ್ಯಾಜ್ಯ ಸುರಿಯುವವರಿಗೆ ₹5 ಸಾವಿರ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತಿ ಅಧ್ಯಕ್ಷ ಎಚ್.ಎ. ಹಂಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT