ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಕೊಡವರ ಸಾಂಪ್ರದಾಯಿಕ ಉಡುಗೆ ತೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ

Last Updated 18 ಮಾರ್ಚ್ 2023, 11:27 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ನಾಪೋಕ್ಲುವಿ‌ನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡವರ ಸಾಂಪ್ರದಾಯಿಕ ಉಡುಪು ತೊಟ್ಟು ವೇದಿಕೆಯನ್ನೇರಿದರು.

ಕುಪ್ಪೆಚಾಲೆ ತೊಟ್ಟು ಪೀಚೆಕತ್ತಿ ಧರಿಸಿರುವ ಅವರು ಇಲ್ಲಿ 23ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ತಡವಾಗಿ ಕಾರ್ಯಕ್ರಮ ಆರಂಭ
ಮಡಿಕೇರಿ:
ಇಲ್ಲಿನ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ಆರಂಭವಾಗಬೇಕಿದ್ದ ಫಲಾನುಭವಿಗಳ ಸಮ್ಮೇಳನ ಮಧ್ಯಾಹ್ನ 3 ಗಂಟೆಗೆ ಆರಂಭವಾಯಿತು.

ಕೊಡಗು ಜಿಲ್ಲೆಯ ಎಲ್ಲ ಭಾಗಗಳಿಂದ ಬಂದಿದ್ದ ಫಲಾನುಭವಿಗಳು ಕಾದು ಕಾದು ಬಸವಳಿದರು.

ಮೈದಾನದ ಪಕ್ಕದಲ್ಲೇ ದ್ವಿತೀಯ ಪಿಯು ಪರೀಕ್ಷಾ ಕೇಂದ್ರವಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ತಡವಾಗಿ ಬಂದೆ ಎಂದು ಕಾರ್ಯಕ್ರಮಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಹೇಳಿದರು.

ಇದಕ್ಕೂ ಮುನ್ನ ಇಲ್ಲಿನ ಕೆ.ಬಾಡಗ ಗ್ರಾಮದ ಹೆಲಿಪ್ಯಾಡನ ನಲ್ಲಿ ಶನಿವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಬಂದಿಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನಲ್ಲಿ ಹೆಚ್ಚುತ್ತಿರುವ ವನ್ಯಜೀವಿ- ಮಾನವ ಸಂಘರ್ಷ ತಡೆಯಲು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಸ್ತೆ ದುರಸ್ತಿ ಕಾರ್ಯವನ್ನು ಮಳೆಗಾಲ ಆರಂಭವಾಗುವುದರ ಒಳಗೆ ಮುಗಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT