ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ: ಸಿದ್ದರಾಮಯ್ಯ

Published 25 ಜನವರಿ 2024, 8:04 IST
Last Updated 25 ಜನವರಿ 2024, 8:04 IST
ಅಕ್ಷರ ಗಾತ್ರ

ಮಡಿಕೇರಿ: ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದಲ್ಲಿ ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿ ವಂಚಿಸಿದೆ ಎಂದು ಹೇಳಿ ಅವರು ಕಾಂಗ್ರೆಸ್‌ಗೆ ಬಂದರು. ಪಕ್ಷವು ಅವರಿಗೆ ಟಿಕೆಟ್ ನೀಡಿತು. ಸ್ವ ಕ್ಷೇತ್ರದಲ್ಲೇ ಅವರು ಸೋತರು. ಆದರೂ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲಾಯಿತು. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಆದರೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಗೊತ್ತಾಗಿಲ್ಲ ಎಂದು ಇಲ್ಲಿ ಗುರುವಾರ(ಇಂದು) ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಈಚೆಗೆ ನನ್ನ ಬಳಿ ಮಾತನಾಡಿದ್ದಾಗಲೂ ಅವರು ಬಿಜೆಪಿ ನನಗೆ ಅನ್ಯಾಯ ಮಾಡಿದೆ. ವಾಪಸ್ ಆ ಪಕ್ಷಕ್ಕೆ ಹೋಗುವುದಿಲ್ಲ ಎಂದಿದ್ದರು ಎಂದು ಸಿಎಂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT