ಸೋಮವಾರಪೇಟೆ: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಾದ್ಯಂತ ಅವಧಿಗೂ ಮುನ್ನ ಪ್ರಾರಂಭವಾದ ಮುಂಗಾರು ಮಳೆಯಿಂದ ಕಾಫಿ ಬೆಳೆ ನಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಕಾಫಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಮಾಡಿತು.

ಸೋಮವಾರ ಸೋಮವಾರಪೇಟೆಗೆ ಆಗಮಿಸಿದ ಬೆಳೆಗಾರರು, ಕಾಫಿ ಮಂಡಳಿಯ ಅಧ್ಯಕ್ಷರನ್ನು ಭೇಟಿ ಮಾಡಿ ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು ಮಾಹಿತಿ ನೀಡಿದರು.

ಅತಿ ಹೆಚ್ಚು ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಜನವರಿಯಿಂದ ಜೂನ್ ಅಂತ್ಯಕ್ಕೆ 70 ರಿಂದ 100 ಇಂಚಿನಷ್ಟು ಮಳೆಯಾಗಿದೆ. ಅತಿಯಾದ ಮಳೆಯಿಂದ ಸಕಾಲದಲ್ಲಿ ಕೃಷಿ ಚಟುವಟಿಕೆ ನಡೆಸಲು ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಈಗಾಗಲೇ ಕಾಫಿ ಗಿಡಗಳಲ್ಲಿ ಕೊಳೆರೋಗ ಕಾಣಿಸಿಕೊಂಡು ಫಸಲು ನಷ್ಟವಾಗುತ್ತಿದೆ. ಇನ್ನೂ ಮೂರು ತಿಂಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಕಾಫಿ ಬೆಳೆಗಾರರು ಸಂಪೂರ್ಣ ನಷ್ಟಕ್ಕೊಳ್ಳಗಾಗಲಿದ್ದಾರೆ ಎಂದು ಶಾಸಕರು ತಿಳಿಸಿದರು.

ಸರ್ಕಾರ ಮತ್ತು ಕಾಫಿ ಮಂಡಳಿ ಕಾಫಿ ಕ್ಷೇತ್ರದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಈಗಿನಿಂದಲೇ ಅಧ್ಯಯನ ನಡೆಸಿ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಹಾಗೂ ವಿವಿಧ ಭಾಗಗಳ ಬೆಳೆಗಾರರು ಮನವಿ ಮಾಡಿದರು.

ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ನಂದಾ ಬೆಳ್ಯಪ್ಪ ಮತ್ತು ಪದಾಧಿಕಾರಿಗಳು, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಸತೀಶ್ ಸೇರಿದಂತೆ ಕಾಫಿ ಬೆಳೆಗಾರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.