ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ: ಬಿಜೆಪಿ ಪ್ರತಿಭಟನೆ

Published 2 ಏಪ್ರಿಲ್ 2024, 5:14 IST
Last Updated 2 ಏಪ್ರಿಲ್ 2024, 5:14 IST
ಅಕ್ಷರ ಗಾತ್ರ

ಸೋಮವಾರಪೇಟೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ನಗರದ ಪುಟ್ಟಪ್ಪ ವೃತದ ಬಳಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸಚಿವ ಶಿವರಾಜ ತಂಗಡಗಿ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂಧರ್ಭ ಮಾತನಾಡಿದ ಮಂಡಲ ಯುವ ಮೋರ್ಚಾ ಅಧ್ಯಕ್ಷ ಮೋಹಿತ್, ‘ಯುವಕರು ಎಲ್ಲೇ ಹೋದರೂ ಮೋದಿ ಮೋದಿ ಎನ್ನುತಾರೆ. ಅಂತವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳುತ್ತಾರೆ. ಇವರು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದು, ಜವಾಬ್ದಾರಿಯಿಂದ ಮಾತನಾಡಬೇಕಿದೆ. ರಾಜ್ಯದ ಮುಖ್ಯಮಂತ್ರಿಗಳು ಇದನ್ನು ಗಮನಿಸಿ ಅವರಿಗೆ ಒಳೆಯ ಸಂಸ್ಕೃತಿ ಹೇಳಿಕೊಡಬೇಕು. ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ಇವರು ಹೋದಲೆಲ್ಲಾ ಘೇರಾವ್ ಹಾಕಿ ಪ್ರತಿಭಟನೆ ಮಾಡುತ್ತೆವೆ’ ಎಂದು ಎಚ್ಚರಿಸಿದರು.

ಮುಖಂಡ ಅಪ್ಪಚ್ಚು ರಂಜನ್ ಮಾತನಾಡಿ, ‘ಶಿವರಾಜ ತಂಗಡಗಿ ಹೇಳಿರುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ ಖಂಡನೆ ವ್ಯಕ್ತಪಡಿಸುತ್ತದೆ. ಪ್ರಧಾನಿ ಮೋದಿಯವರು ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತಿದ್ದು, ಅಂಥವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಇವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತಾರೆ’ ಎಂದರು.

ಕೊಡಗಿನಲ್ಲಿ ರೈತರಿಗೆ ಆಗುತ್ತಿರುವ ಸಂಕಷ್ಟ, ಆಸ್ಪತ್ರೆಗೆ ವೈದ್ಯರ ನೇಮಕ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್ ನವೀನ್ ಕುಮಾರ್ ಅವರ ಮೂಲಕ ಮನವಿ ಸಲ್ಲಿಸಿದರು.

ಮಾದಪ್ಪ, ಮಹೇಶ್ ತಿಮ್ಮಯ್ಯ, ಮಹಿಳಾ ಮೋರ್ಚಾದ ಅಧ್ಯಕ್ಷೆ ತಂಗಮ್ಮ ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT