ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ.ಎಂ.ಶಹೀದ್ ತೆಕ್ಕಿಲ್‌ಗೆ ಅಭಿನಂದನೆ 6ರಂದು

Published 3 ಜುಲೈ 2024, 4:31 IST
Last Updated 3 ಜುಲೈ 2024, 4:31 IST
ಅಕ್ಷರ ಗಾತ್ರ

ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಅಭಿನಂದನಾ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮ್ಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಶಾಸಕರಾದ ಭಾಗೀರಥಿ ಮುರುಳ್ಯ 55 ಸೇವಾ ಚಟುವಟಿಕೆಯ ಸವಲತ್ತು ವಿತರಿಸಲಿದ್ದಾರೆ’ ಎಂದರು.

ತೆಕ್ಕಿಲ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸನ್ಮಾನಿಸಲಿದ್ದಾರೆ. ಲಯನ್ಸ್ ಸಂಸ್ಥೆಯ ಎಂಜೆಎಫ್ ಎಂ.ಬಿ.ಸದಾಶಿವ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‌ಗೌಡ, ಮಾಜಿ ಸಚಿವ ರಮಾನಾಥ ರೈ ಮುಖ್ಯ ಅತಿಥಿಯಾಗಿರಲಿದ್ದಾರೆ ಎಂದರು.

ಸಮಿತಿಯ ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಇಕ್ಬಾಲ್ ಎಲಿಮಲೆ, ಪರಶುರಾಮ ಚಿಲ್ತಡ್ಕ, ಅಬ್ಬಾಸ್, ಗ್ಯಾರಂಟಿ ಅನುಷ್ಠಾನ ಸಮಿತಿಯ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ರಂಜಿತ್ ರೈ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT