ಮಡಿಕೇರಿ: ‘ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಮಾಜಿ ಸಚಿವ ರಮಾನಾಥ ರೈ ಇಲ್ಲಿ ಶನಿವಾರ ಕಿಡಿಕಾರಿದರು.

‘ವೈದ್ಯಕೀಯ ಉಪಕರಣ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಬಂದರೂ ತನಿಖೆ ನಡೆಸುತ್ತಿಲ್ಲ. ಅಧಿಕಾರಕ್ಕೆ ಬಿಜೆಪಿಯುವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಇವರಿಗೆ ಜನಹಿತ ಬೇಕಿಲ್ಲ. ಕೋವಿಡ್ ಹೆಸರಿನಲ್ಲಿ ದುಡ್ಡು ಹೊಡೆದಿರುವ ಸರ್ಕಾರದ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ. ಪ್ರತಿ ಗ್ರಾಮಕ್ಕೂ ತೆರಳಿ ಸರ್ಕಾರದ ಭ್ರಷ್ಟಾಚಾರದ ಮಾಹಿತಿ ನೀಡುತ್ತೇವೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಖರೀದಿಗೆ ಅನುಮತಿ ಕೊಟ್ಟಿದ್ದಾರೆ. ಈಗ ಅವರು ಯಾವುದಕ್ಕೂ ಸ್ಪಷ್ಟನೆ ಕೊಡುತ್ತಿಲ್ಲ. ದುಡ್ಡು ತಿಂದವರೇ ಮಾತನಾಡಲಿ ಎಂದು ಯಡಿಯೂರಪ್ಪ ಮೌನವಾಗಿರಬಹುದು’ ಎಂದು ರೈ ಕುಟುಕಿದರು.

‘ಮುಖ್ಯಮಂತ್ರಿ ಮೌನ ಸಂಶಯ ಮೂಡಿಸಿದೆ. ಆದ್ದರಿಂದ, ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಸರ್ಕಾರದ ವಿರುದ್ಧ ಆರೋಪಿಸಿದರೆ ಪಕ್ಷದಿಂದ ಲೀಗಲ್ ನೋಟಿಸ್ ನೀಡಿ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ಮಾಜಿ ಸಂಸದ ಧ್ರುವನಾರಾಯಣ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.