ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಪಡಿಸಿ’

Last Updated 8 ಜೂನ್ 2021, 7:43 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ‘ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ನಿರಂತರ ಸೇವೆಯಿಂದ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ ಮತ್ತೆ ಸಮಸ್ಯೆ ತಂದುಕೊಳ್ಳಬಾರದು’ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರೆ ಕೇಚಮಾಡ ಸರಿತಾ ಪೂಣಚ್ಚ ಆಗ್ರಹಿಸಿದ್ದಾರೆ.

‘ಜು. 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೆ 10ನೇ ತರಗತಿ ಪರೀಕ್ಷೆ ನಡೆಸಿ ಇಳಿಮುಖಗೊಳ್ಳುತ್ತಿರುವ ಸಾಂಕ್ರಮಿಕ ರೋಗವನ್ನು ಹೆಚ್ಚಿಸುವುದು ಬೇಡ. ಕೇಂದ್ರ ಸರ್ಕಾರ ಸಿಬಿಎಸ್‌ಸಿ, ಐಸಿಎಸ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿರುವಂತೆ ರಾಜ್ಯದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ರದ್ದುಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರ, ಅವರಿಗಿಂತ ವಯಸ್ಸಿನಲ್ಲಿ ಚಿಕ್ಕರಿರುವ 10ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸಿ ಕೋವಿಡ್ ಆತಂಕಕ್ಕೆ ತಳ್ಳುವುದು ಬೇಡ. ಮಕ್ಕಳ ಜೀವದ ಜೊತೆ ಚೆಲ್ಲಾಟ ನಡೆಸದೆ ಕೂಡಲೆ ಪರೀಕ್ಷೆಯನ್ನು ರದ್ದುಪಡಿಸಬೇಕು. ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಫಲಿತಾಂಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT