ಕೊಡಗಿನಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಿ

ಮಡಿಕೇರಿ: ಕೇಂದ್ರ–ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳಿಂದ ಬೇಸತ್ತಿರುವ ಜನರು, ಕಾಂಗ್ರೆಸ್ ಆಡಳಿತ ಮತ್ತೆ ಅಸ್ತಿತ್ವಕ್ಕೆ ಬರಬೇಕೆನ್ನುವ ನಿರೀಕ್ಷೆಯಲ್ಲಿದ್ದು, ಪಕ್ಷ ಸಂಘಟನೆ ಮತ್ತಷ್ಟು ಚುರುಕುಗೊಳ್ಳಬೇಕಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.
ಗ್ರಾ.ಪಂ. ಚುನಾವಣೆಯಲ್ಲಿ ಕರಿಕೆ ಪಂಚಾಯಿತಿಗೆ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದರಿಂದ ಕರಿಕೆಯಲ್ಲಿ ನಡೆದ ವಿಜಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕರಿಕೆ ಗ್ರಾಮದ ಕಾರ್ಯಕರ್ತರ ಉತ್ಸಾಹ ಇತರರಿಗೂ ಮಾದರಿಯಾಗಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಲು ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಮಾತನಾಡಿ ಪಕ್ಷ ಸಂಘಟನೆ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ವಕ್ತಾರ ಎ.ಎಸ್.ಪೊನ್ನಣ್ಣ ಮಾತನಾಡಿ, ಜನಪರ ಕಾಳಜಿಯೊಂದಿಗೆ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು. ಪಕ್ಷ ಬಲವರ್ಧನೆಯ ಸಂದರ್ಭ ಕಾನೂನಾತ್ಮಕ ಸಹಕಾರ ನೀಡುವುದಾಗಿ ಹೇಳಿದರು.
ಹಿರಿಯ ಮುಖಂಡ ಎಚ್.ಎಸ್.ಚಂದ್ರಮೌಳಿ, ಕೆಪಿಸಿಸಿ ಫ್ಯಾನಲಿಸ್ಟ್ ಟಿ.ಪಿ.ರಮೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಟಿ.ಎಂ.ಶಾಹಿದ್, ಕರಿಕೆ ಕಾಂಗ್ರೆಸ್ ಪ್ರಮುಖ ಎನ್.ಬಾಲಚಂದ್ರ ನಾಯರ್ ಮತ್ತಿತರರು ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.