ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಮಾತ್ರ ಅಸಂಘಟಿತ ಕಾರ್ಮಿಕರ ಹಿತ

ಎ.ಎಸ್. ಪೊನ್ನಣ್ಣ ಅಭಿಮತ
Last Updated 27 ಮಾರ್ಚ್ 2023, 11:26 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ‘ರಾಜ್ಯದ ಬಿಜೆಪಿ ಸರ್ಕಾರ ಕಾರ್ಮಿಕರು, ಶೋಷಿತರ, ಬಡವರ ಪರ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲ ವರ್ಗ, ಅಲ್ಪಸಂಖ್ಯಾತರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಆರೋಪಿಸಿದರು.

ಇಲ್ಲಿನ ಕಿತ್ತಳೆ ಸಹಕಾರ ಸಂಘದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ಸಮಾವೇಶ ಉದ್ಘಾಟಿಸಿದ ಅವರು, ‘ಮೀಸಲಾತಿಗೆ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾತಿ ಮತ್ತು ಧರ್ಮಗೊಳಗೆ ಕಂದಕ ಸೃಷ್ಟಿಸುತ್ತಿದೆ. ಶ್ರೀಮಂತರು, ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಇದನ್ನು ಸರಿದೂಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ’ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಮಾತನಾಡಿ, ‘ಕಾರ್ಮಿಕರ ಬದುಕು ಹಸನಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಸುನಿಲ್, ಬಬೀತ್, ಪೊನ್ನಂಪೇಟೆಯ ಮಂಜುಳಾ, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಬಾನಂಡ ಪೃಥ್ಯು, ಪೊನ್ನಂಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ನವೀನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT