ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನಾ ಮನೆಗೆ ಪುಷ್ಪ ಅಮರನಾಥ್ ಭೇಟಿ

Published 18 ಮೇ 2024, 14:17 IST
Last Updated 18 ಮೇ 2024, 14:17 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಮೇ. 9ರಂದು ಕೊಲೆಯಾದ ಮೀನಾಳ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯೂ ಆಗಿರುವ ಡಾ. ಪುಷ್ಪ ಅಮರನಾಥ್ ಅವರು ಈಚೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವ ಹೇಳಿದರು.

ಮೀನಾಳ ಪೋಷಕರಾದ ಸುಬ್ರಮಣಿ ಹಾಗೂ ಜಾನಕಿ ಅವರಿಂದ ಘಟನೆಯ ವಿವರಣೆ ಪಡೆದರು. ವೈಯುಕ್ತಿಕವಾಗಿ ಸಹಾಯ ಹಸ್ತ ಚಾಚಿದರು. ಇಂತಹ ಪೈಶಾಚಿಕ ಕೃತ್ಯ ಎಸಗಿದ ಆರೋಪಿಗೆ ತಕ್ಕ ಶಿಕ್ಷೆಯಾಗಲೇಬೇಕು. ಮುಂದೆ ಇಂತಹ ಕೃತ್ಯಗಳು ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು. ಪುಷ್ಪವಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT