ಭಾನುವಾರ, ಸೆಪ್ಟೆಂಬರ್ 22, 2019
27 °C

ಮಡಿಕೇರಿ: ಮಳೆಯ ನಡುವೆಯೂ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Published:
Updated:

ಮಡಿಕೇರಿ: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನವು ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿ, ಮಡಿಕೇರಿಯಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೂ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ಗಾಂಧಿ ಮೈದಾನದಿಂದ ಮಳೆಯ ನಡುವೆ ಪ್ರತಿಭಟನೆ ಮೆರವಣಿಗೆ ಹೊರಟಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಶಿವಕುಮಾರ್ ಬಂಧನಕ್ಕೆ ಆಕ್ರೋಶ ವ್ಯಕ್ತಪಡೆಸಿ ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆತಡೆ ನಡೆಸಲಾಯಿತು. 

ಪ್ರತಿಭಟನೆ ವೇಳೆ ಕೆಲವು ಕಾರ್ಯಕರ್ತರು ನಡು ರಸ್ತೆಯಲ್ಲಿಯೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಆಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

Post Comments (+)