ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾನ್ಯ ಸಭೆಗೆ ಸತತ ಗೈರು: ಗ್ರಾ.ಪಂ. ಸದಸ್ಯೆ ಅನರ್ಹ

Published 27 ಫೆಬ್ರುವರಿ 2024, 4:20 IST
Last Updated 27 ಫೆಬ್ರುವರಿ 2024, 4:20 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಐದನೇ ವಾರ್ಡ್ (ಕಾಟ್ರಕೊಲ್ಲಿ) ಸದಸ್ಯರಾಗಿ ಆಯ್ಕೆ ಹೊಂದಿದ್ದ ಪಿ.ಆರ್.ಮಂಜುಳಾ ಸತತವಾಗಿ ನಾಲ್ಕು ಸಾಮಾನ್ಯ ಸಭೆಗೆ ಗೈರು ಹಾಜರಾದ ಕಾರಣ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಸದಸ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದರ ಜತೆಗೆ ಪ್ರಕರಣ ಸಂಖ್ಯೆ 43ರ ಅಡಿಯಲ್ಲಿ ಮುಂದಿನ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಆದೇಶವನ್ನು ಹೊರಡಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಆಯ್ಕೆಗೊಂಡಿದ್ದ ಪಿ.ಆರ್.ಮಂಜುಳಾ ಎರಡೂವರೆ ವರ್ಷಗಳ ಹಿಂದೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಡ್ಡ ಮತದಾನ ಮಾಡಿದ್ದರು. ಇದರ ಜತೆಗೆ ಇವರು ಸತತವಾಗಿ ಸಾಮಾನ್ಯ ಸಭೆಗೆ ಗೈರು ಹಾಜರಾಗಿದ್ದರು. ಇದನ್ನು ಪರಿಗಣಿಸಿದ ಸರ್ಕಾರ ಮಂಜುಳಾ ಅವರನ್ನು ಸದಸ್ಯತ್ವದಿಂದಲೇ ವಜಾಗೊಳಿಸಿದೆ.

ಒಟ್ಟು 20 ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ 11 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಇದೀಗ ಒಬ್ಬ ಸದಸ್ಯ ಅನರ್ಹಗೊಂಡಿದ್ದರಿಂದ 10 ಬಿಜೆಪಿ ಬೆಂಬಲಿತ ಸದಸ್ಯರಿಗೆ ಇಳಿದಿದೆ. ಕಾಂಗ್ರೆಸ್ ಬೆಂಬಲಿತ 9 ಸದಸ್ಯರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT