ಮಡಿಕೇರಿ: ‘ಗ್ರಾಹಕರ ಹಿತರಕ್ಷಣಾ ಸಮಿತಿ ಸಭೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಿ ಗ್ರಾಹಕರ ಹಕ್ಕುಗಳನ್ನು ಸಂರಕ್ಷಿಸಬೇಕು’ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ವಕೀಲರ ಸಂಘದಿಂದ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಕೆಯಾಗುವ ಪ್ರಕರಣಗಳನ್ನು 90 ದಿನಗಳಲ್ಲಿ ವಿಲೇವಾರಿ ಮಾಡಲು ಆಯೋಗ ಶ್ರಮಿಸುತ್ತಿದೆ.
ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸಲು ರಾಜ್ಯದಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಹಕರ ಹಿತರಕ್ಷಣಾ ಕಾಯ್ದೆ ಬಗ್ಗೆ ವಕೀಲರಿಗೆ ಮಾಹಿತಿ ನೀಡಿ ರಾಜ್ಯದ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಗ್ರಾಹಕರ ಆಯೋಗ ಮತ್ತು ನ್ಯಾಯಾಂಗಗಳು ಸಮನ್ವಯತೆಯಿಂದ ಕೆಲಸ ಮಾಡುತ್ತಿವೆ. ಎಲ್ಲಾ ಹಂತದ ನ್ಯಾಯಾಲಯಗಳ ಹಾಗೂ ವಕೀಲರ ಸಂಘದ ಸಹಕಾರ ಅತ್ಯಗತ್ಯ. ಗ್ರಾಹಕರ ಹಿತರಕ್ಷಣೆ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು ಎಂದರು.

ಆಯೋಗದಲ್ಲಿ ₹ 18 ಕೋಟಿ ಇದ್ದು, ಇದರಲ್ಲಿ ₹ 5 ಕೋಟಿಯನ್ನು ವಿವಿಧ ಅಭಿವೃದ್ಧಿ ಕಾಮಗಾರಿ, ಜಾಗೃತಿ ಅಭಿಯಾನಕ್ಕೆ ಬಳಸಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು. ರಸ್ತೆ ಅಪಘಾತಗಳು, ಆಸ್ಪತ್ರೆಗಳು, ವ್ಯಾಪಾರ-ವಹಿವಾಟು ಮತ್ತಿತರ ಕಡೆಗಳಲ್ಲಿ ಗ್ರಾಹಕರಿಗೆ ಆಗುವ ಮೋಸ, ವಂಚನೆ ತಪ್ಪಿಸುವಲ್ಲಿ ತಾವು ನೀಡಿರುವ ತೀರ್ಪಿನ ವಿವಿಧ ಪ್ರಕರಣ ಸಂಬಂಧ ಸ್ವಾರಸ್ಯಕರವಾಗಿ ಅವರು ವಿವರಿಸಿದರು.

ಗ್ರಾಹಕರ ಪರಿಹಾರ ವೇದಿಕೆಯ ಸದಸ್ಯರಾದ ಗೌರಮ್ಮಣಿ ಮಾತನಾಡಿ, ಗ್ರಾಹಕರ ಆಯೋಗವು ಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುತ್ತಿದ್ದು, ಅವರ ವಿಶ್ವಾಸ ಗಳಿಸಲು ಶ್ರಮಿಸುತ್ತಿದೆ. ನ್ಯಾಯ ಒದಗಿಸುತ್ತಿದೆ ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹೊಸಮನಿ ಪುಂಡಲಿಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸಿ.ರೇಣುಕಾಂಬ ಮಾತನಾಡಿದರು.

ಆಹಾರ ಇಲಾಖೆ ಉಪ ನಿರ್ದೇಶಕ ಎಂ.ಭೀಮರಾಯ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು, ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ನಾಗೇಂದ್ರ ಬಾಬು, ಮಹಾಲಿಂಗಸ್ವಾಮಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್.ಜಯಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.