ನಾಪೋಕ್ಲು: ಸಮೀಪದ ಪೇರೂರು, ಪುಲಿಕೋಟು, ನೆಲಜಿ, ಪಂದೇಟು ಭಾಗದ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿ ಬೆಳೆಗಳನ್ನು ನಾಶಪಡಿಸಿವೆ.

15 ದಿನಗಳಿಂದ ಕಾಡಾನೆಗಳ ಹಿಂಡು ತೋಟಗಳಲ್ಲಿ ದಾಂಧಲೆ ನಡೆಸಿದ್ದು, ತೆಂಗು, ಅಡಿಕೆ, ಕಾಫಿ ಗಿಡಗಳನ್ನು ಧ್ವಂಸಗೊಳಿಸಿದ್ದು, ರೈತರಿಗೆ ನಷ್ಟವಾಗಿದೆ.

‘ಕಾಡಾನೆಗಳ ಉಪಟಳದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಕಾಡಾನೆಗಳನ್ನು ಒಂದು ಭಾಗದಿಂದ ಓಡಿಸಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಗ್ರಾಮದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸಮಾಡುತ್ತಿದ್ದಾರೆ. ಆದರೆ ಮತ್ತೆ ರಾತ್ರಿ ಹಿಂತಿರುಗುವ ಕಾಡಾನೆಗಳು ಗಿಡಗಳನ್ನು ಧ್ವಂಸ ಮಾಡುತ್ತಿವೆ’ ಎಂದು ಪುಲಿಕೋಟು ಗ್ರಾಮದ ಬೆಳೆಗಾರ ಮಣವಟ್ಟೀರ ದಯಾಚಿಣ್ಣಪ್ಪ ಬೇಸರ ವ್ಯಕ್ತಪಡಿಸಿದರು.

‘ಕಾಡಾನೆಗಳನ್ನು ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.