ಮಡಿಕೇರಿ: ಕೊಡಗು ಸಹಕಾರ ರತ್ನ ಪ್ರಶಸ್ತಿಯನ್ನು ಹಿರಿಯ ಸಹಕಾರಿ ಚಿರಿಯಪಂಡ ಕೆ.ಉತ್ತಪ್ಪ ಅವರಿಗೂ, ಶ್ರೇಷ್ಠ ಸಹಕಾರಿ ಪ್ರಶಸ್ತಿಯನ್ನು ಎಚ್.ಎಸ್.ಮುದ್ದಪ್ಪ, ತಳೂರು ಕಿಶೋರ್ ಕುಮಾರ್, ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಯನ್ನು ದೇವಾಂಬಿಕಾ ಮಹೇಶ್, ಉತ್ತಮ ಸಹಕಾರಿ ಸಿಬ್ಬಂದಿ ಪ್ರಶಸ್ತಿಯನ್ನು ಆಲೆಮಾಡ ಎಸ್.ಕಾವೇರಮ್ಮ ಅವರಿಗೂ ಇಲ್ಲಿನ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ‘ಉನ್ನತಿ’ ಭವನದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಗುರುವಾರ ನಡೆದ ಅಖಿಲ ಭಾರತ 72 ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ , ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರವಾಗಿದೆ ಎಂದರು.

ರೈತರ ಬದುಕಿಗೆ ಸಹಕಾರ ಸಂಘಗಳು ಬೆನ್ನುಲುಬಾಗಿದ್ದು, ಕೃಷಿ ಚಟುವಟಿಕೆಯನ್ನು ಕೈಗೊಳ್ಳಲು ಸಹಕಾರ ಸಂಘಗಳು ಸಹಕಾರಿಯಾಗಿವೆ ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಹಿರಿಯರ ಶ್ರಮ ಹೆಚ್ಚಿನದ್ದಾಗಿದೆ. ಸಹಕಾರ ಸಂಘಗಳು ಕೊಡಗು ಜಿಲ್ಲೆಯಲ್ಲಿ ಉತ್ತಮವಾಗಿ ನಡೆಯುತ್ತಿರುವುದು ಮೆಚ್ಚಲೇಬೇಕು. ಎಂದು ಶ್ಲಾಘಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಮಾತನಾಡಿ ಸಹಕಾರ ಸಂಘಗಳ ಬ್ಯಾಂಕ್ನಲ್ಲಿ ಏಕರೂಪದ ತಂತ್ರಾಂಶ ಅಳವಡಿಸಿಕೊಳ್ಳಲಾಗಿದೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಸಹಕಾರ ಬ್ಯಾಂಕ್ಗಳಲ್ಲಿಯೂ ಸಹ ಡಿಜಿಟಲೀಕರಣಕ್ಕೆ ಮುಂದಾಗಲಾಗಿದೆ ಎಂದರು.

ಸಹಕಾರ ಬ್ಯಾಂಕುಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಪೈಲೆಟ್ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಪೆಟ್ರೋಲ್ ಬಂಕ್, ಆಸ್ಪತ್ರೆ, ಕಲ್ಯಾಣ ಮಂಟಪ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಹಕಾರ ಸಂಘ ಹೆಜ್ಜೆ ಹಾಕಿರುವುದು ಶ್ಲಾಘನೀಯವಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ಬಹು ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಸಹಕಾರ ಸಂಘ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಕೊಡಗು ಡಿಸಿಸಿ ಬ್ಯಾಂಕ್ 24 ಶಾಖೆಗಳನ್ನು ಹೊಂದಿದ್ದು, ಉಳಿದಂತೆ ತಿತಿಮತಿ, ಕಕ್ಕಬ್ಬೆ, ಗುಡ್ಡೆಹೊಸೂರು ಮತ್ತಿತರ ಕಡೆಗಳಲ್ಲಿ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಆರಂಭಿಸಲಾಗುತ್ತದೆ ಎಂದರು.

ಕೊಡಗು ಜಿಲ್ಲೆಯ ಸಹಕಾರ ಕ್ಷೇತ್ರದ ದೊಡ್ಡಯ್ಯ ಅವರ ಭಾವಚಿತ್ರವನ್ನು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಕಚೇರಿಯಲ್ಲಿ ಅಳವಡಿಸಲು ಇದೇ ಸಂದರ್ಭದಲ್ಲಿ ಕರೆ ನೀಡಿದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎಚ್.ಕೆ.ಮಾದಪ್ಪ, ಉಪಾಧ್ಯಕ್ಷ ಕೆ.ಹರೀಶ್ ಪೂವಯ್ಯ, ನಿರ್ದೇಶಕರಾದ ಮನುಮುತ್ತಪ್ಪ, ಕೆ.ಎಂ.ತಮ್ಮಯ್ಯ, ಅಜಯ್ ಕುಮಾರ್, ಶ್ಯಾಮಚಂದ್ರ, ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿಉತ್ತಪ್ಪ, ಅಮೃತ್ ವಿ.ಸಿ., ಎಸ್.ಆರ್.ಸುನೀಲ್ ರಾವ್, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ಎ.ಎಂ.ಮುತ್ತಪ್ಪ, ಪಿ.ಎಂ.ಚಂದ್ರಪ್ರಕಾಶ್, ಎಚ್.ಎಂ.ರಮೇಶ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಹೊಸೂರು ಸತೀಶ್ ಕುಮಾರ್, ಕಾಂಗೀರ ಸತೀಶ್, ಅರುಣ್ ಭೀಮಯ್ಯ, ಪಿ.ಪಿ.ಪೆಮ್ಮಯ್ಯ, ಕಿಲನ್ ಗಣಪತಿ, ಶರತ್ ಶೇಖರ್, ನಾಪಂಡ ಉಮೇಶ್ ಉತ್ತಪ್ಪ, ಪಟ್ರಪಂಡ ರಘುನಾಣಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ವೃತ್ತಿಪರ ನಿರ್ದೇಶಕರಾದ ಮುಂಡಂಡ ಸಿ.ನಾಣಯ್ಯ, ಎ.ಗೋಪಾಲಕೃಷ್ಣ, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್.ಡಿ.ರವಿಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕಿ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ ಭಾಗವಹಿಸಿದ್ದರು.