ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರ ಸಂಘಗಳು ರೈತರ ಬೆನ್ನೆಲುಬು’

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅಭಿಮತ
Last Updated 20 ನವೆಂಬರ್ 2019, 17:14 IST
ಅಕ್ಷರ ಗಾತ್ರ

ಮಡಿಕೇರಿ: ‘ಸಹಕಾರ ಸಂಘಗಳು ರೈತರ ಬೆನ್ನೆಲುಬು’ ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು.

ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಆಶ್ರಯದಲ್ಲಿ ನಗರದ ಬಾಲಭವನದಲ್ಲಿ ಬುಧವಾರ ನಡೆದ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ ಹಾಗೂ ತಂತ್ರಜ್ಞಾನ ಅಳವಡಿಕೆ ಮತ್ತು ಗಣಕೀಕರಣ ದಿನಾಚರಣೆ ಹಾಗೂ ಕೊಡಗು ಸಹಕಾರ ರತ್ನ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಹಕಾರ ಸಂಘಗಳಿಗೆ ಇನ್ನೂ ಹೆಚ್ಚಿನ ಸ್ವಾಯತ್ತತೆ ನೀಡಬೇಕಿದೆ’ ಎಂದು ಆಗ್ರಹಿಸಿದರು.

‘ಸಹಕಾರ ಕ್ಷೇತ್ರದಲ್ಲಿ ಸೇವಾ ಮನೋಭಾವವಿದ್ದು, ರೈತರಿಗೆ ಹೆಚ್ಚಿನ ಸೇವೆ ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಸಹಕಾರ ಬ್ಯಾಂಕ್‌ಗಳು ಸ್ವಾವಲಂಬಿ ಹಾಗೂ ಸದೃಢವಾಗಿದ್ದು ಸ್ವಾಯತ್ತತೆ ನೀಡಿದ್ದಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಕೆ.ಜಿ.ಬೋಪಯ್ಯ ಹೇಳಿದರು.

‘ಸರ್ಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದು. ಸಹಕಾರ ಚಳವಳಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಸಹಕಾರಿ ಕ್ಷೇತ್ರದಲ್ಲಿ ಜಿಲ್ಲೆಯ ಅನೇಕ ಹಿರಿಯರು ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ’ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಬಾಂಡ್ ಗಣಪತಿ ಮಾತನಾಡಿ, ‘ಸಹಕಾರ ಸಂಘ ಮತ್ತು ಸಹಕಾರ ಬ್ಯಾಂಕ್‌ಗಳು ಹತ್ತು ಸಾವಿರ ಕೋಟಿ ರೂಪಾಯಿ ವಾರ್ಷಿಕ ವಹಿವಾಟು ನಡೆಸಿ ಬೃಹತ್ತಾಗಿ ಬೆಳೆದಿದೆ. ಕೊಡಗು ಸಹಕಾರಿ ಬ್ಯಾಂಕ್ ವಾಣಿಜ್ಯ ಹಾಗೂ ಖಾಸಗಿ ಬ್ಯಾಂಕ್‌ಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ’ ಎಂದರು.

ರೈತರ ಬೆಳೆಗೆ ಒಳ್ಳೆಯ ನಿರ್ದಿಷ್ಟ ಬೆಲೆ ಒದಗಿಸುವುದು. ಕ್ರಿಮಿನಾಶಕ ಮತ್ತು ಗೊಬ್ಬರದ ದರದಲ್ಲಿ ರಿಯಾಯಿತಿ, ಮಧ್ಯವರ್ತಿಗಳಿಲ್ಲದೇ ಕೃಷಿಯ ಮಾರಾಟ ಮತ್ತು ರೈತರೆ ಬೆಳೆಯ ಬೆಲೆ ನಿರ್ಧಾರ ಮಾಡುವಂತಾದರೆ ಮಾತ್ರ ರೈತರ ಬೆಳವಣಿಗೆ ಸಾಧ್ಯ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ನುಡಿದರು.

ಶ್ರೇಷ್ಠ ಸಹಕಾರಿ ಪ್ರಶಸ್ತಿ ಪಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಕೆ.ಚಿಣ್ಣಪ್ಪ ಮಾತನಾಡಿ, ಸಾಲ ಸೌಲಭ್ಯದಲ್ಲಿ ಹೆಚ್ಚಳ ಮತ್ತು ಕಡಿಮೆ ಬಡ್ಡಿ ದರದಲ್ಲಿ ಜನರಿಗೆ ಅನುಕೂಲವಾಗುವಂತೆ ಸಹಕಾರಿ ಬ್ಯಾಂಕ್‌ಗಳು ಸಹಕರಿಸಬೇಕು, ವೈದ್ಯನಾಥನ್ ವರದಿ ಜಾರಿಯಾದರೆ ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯವಾಗುತ್ತದೆ ಎಂದು ಹೇಳಿದರು.

ಬಲ್ಯಮನೆ ಗಣಪತಿ ಅವರು ಮಾತನಾಡಿದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉಪಾಧ್ಯಕ್ಷ ಕೆ.ಎಸ್.ಹರೀಶ್ ಪೂವಯ್ಯ, ಜಿಲ್ಲಾ ಸಹಕಾರ ಯೂನಿಯನ್‌ ಉಪಾಧ್ಯಕ್ಷ ಪಿ.ಸಿ.ಅಚ್ಚಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕ ಎಚ್.ಎಂ.ರಮೇಶ್, ರಘು ನಾಣಯ್ಯ, ಕನ್ನಂಡ ಸಂಪತ್, ಬಿ.ಕೆ.ಚಿಣ್ಣಪ್ಪ, ಕೆ.ಎ.ಜಗದೀಶ್, ಉಷಾ ತೇಜಸ್ವಿ, ಕೆ.ಅರುಣ್ ಭೀಮಯ್ಯ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕರಾದ ಎಂ.ಪ್ರೇಮಾ ಸೋಮಯ್ಯ, ಎಸ್.ಪಿ.ನಿಂಗಪ್ಪ, ಬಿ.ಎ.ರಮೇಶ್ ಚಂಗಪ್ಪ ಇತರರು ಇದ್ದರು.

ಜಿಲ್ಲಾ ಸಹಕಾರ ಯೂನಿಯನ್‌ ಸಿಇಒ ಯೋಗೇಂದ್ರ ನಾಯಕ್ ನಿರೂಪಿಸಿದರು. ಕೊಡಪಾಲು ಗಣಪತಿ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮಂಜುಳಾ ಪ್ರಾರ್ಥಿಸಿದರು. ರವಿ ಬಸಪ್ಪ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT