ಬುಧವಾರ, ಏಪ್ರಿಲ್ 1, 2020
19 °C

ಕೊರೊನಾ ಶಂಕಿತ ವ್ಯಕ್ತಿಗೆ ಮಡಿಕೇರಿಯಲ್ಲಿ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊರೊನಾ ವೈರಸ್‌ ಸೋಂಕಿನ ಶಂಕೆಯ ಮೇರೆಗೆ ದುಬೈನಿಂದ ತಾಯ್ನಾಡಿಗೆ ಮರಳಿದ್ದ ವ್ಯಕ್ತಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಸ್ಥಳೀಯರಲ್ಲೂ ಆತಂಕಕ್ಕೆ ಕಾರಣವಾಗಿದೆ. 

‘ಶಂಕಿತ ವ್ಯಕ್ತಿಯ ರಕ್ತದ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರ ವರದಿ ಇನ್ನೂ ಬಂದಿಲ್ಲ’ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಕೊಡಗು ಜಿಲ್ಲೆಯವರೇ ಆಗಿದ್ದು ಕಳೆದ ವಾರ ದುಬೈನಿಂದ ಮರಳಿದ್ದರು. 

‘ಇರಾನ್ ಹಾಗೂ ಇರಾಕ್‌ನಿಂದ ಸ್ವಗ್ರಾಮಕ್ಕೆ ಬಂದಿದ್ದ ಜಿಲ್ಲೆಯ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಯಾವುದೇ ರೀತಿಯ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು