ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಲಾಕ್‌ಡೌನ್‌ ಸಡಿಲಿಕೆ

Last Updated 8 ಜುಲೈ 2021, 14:49 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಇಳಿಮುಖವಾಗುತ್ತಿದ್ದು ಶುಕ್ರವಾರದಿಂದ ಲಾಕ್‌ಡೌನ್‌ ಸಡಿಲಿಕೆಯಾಗಲಿದೆ. ರಾಜ್ಯ ಸರ್ಕಾರವು ಜುಲೈ 19ರ ತನಕ ವಿನಾಯಿತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಜಿಲ್ಲಾಡಳಿತದಿಂದ ಶುಕ್ರವಾರ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.

ರಾಜ್ಯದ ಬೇರೆ ಎಲ್ಲ ಜಿಲ್ಲೆಗಳಲ್ಲೂ ಪಾಸಿಟಿವ್‌ ದರ ಇಳಿಕೆಯಾಗಿದ್ದರಿಂದ ಕಳೆದ ವಾರ ಲಾಕ್‌ಡೌನ್‌ ತೆರವು ಮಾಡಲಾಗಿತ್ತು. ಕೊಡಗಿನಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗಿತ್ತು.

ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡುವ ನಿರೀಕ್ಷೆಯಿದೆ. ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಈ ಸಮಯವು ರಾತ್ರಿ 8 ಗಂಟೆಯ ತನಕ ವಿಸ್ತರಣೆ ಆಗಲಿದೆ.

‘ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದ್ದು, ಪ್ರವಾಸೋದ್ಯಮ ಚುಟುವಟಿಕೆಗೆ ಮುಕ್ತ ಅವಕಾಶ ನೀಡಬೇಕು’ ಎಂದು ಪ್ರವಾಸೋದ್ಯಮ ಅವಲಂಬಿತರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT