ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧನಾ ಕಾಲೇಜಿನ ಆಸ್ಪತ್ರೆ (ಜಿಲ್ಲಾಸ್ಪತ್ರೆ)ಯಲ್ಲಿರುವ ಲಿಕ್ವಿಡ್ ಆಕ್ಸಿಜನ್ ಘಟಕ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧಕ ಕಾಲೇಜು
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧಕ ಆಸ್ಪತ್ರೆಯ (ಜಿಲ್ಲಾಸ್ಪತ್ರೆ) ಒಳ ಆವರಣ

2020ರಲ್ಲಿ ಕೋವಿಡ್‌ನಿಂದ ಲಾಕ್‌ಡೌನ್ ಮಾಡಲಾಗಿತ್ತು. ಜನರು ಸಂಕಷ್ಟ ಎದುರಿಸುವಂತಾಯಿತು. ಇದೀಗ ಮತ್ತೊಮ್ಮೆ ಕೋವಿಡ್ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹಾಗೂ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು. ಕೋವಿಡ್ ಹರಡದಂತೆ ಕ್ರಮ ವಹಿಸಬೇಕು.
ಎ.ಎಸ್ ಮುಸ್ತಫ, ಸಿದ್ದಾಪುರ, (2020ರ ಕೋವಿಡ್ ಸಂದರ್ಭ ಸೇವೆ ಸಲ್ಲಿಸದವರು)
ಕೋವಿಡ್ ಇಡೀ ಜಗತ್ತಿಗೇ ಮಾರಿಯಾಗಿ ಕಾಡಿತು. ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿತು. ಮತ್ತೆ ಕೋವಿಡ್ ಬರುತ್ತಿದೆ ಎಂಬ ಭಯ ಸೃಷ್ಠಿಸಿದೆ. ಜಿಲ್ಲಾಡಳಿತ ಕೋವಿಡ್ ಪರೀಕ್ಷೆ ಸೇರಿದಂತೆ ಆರೋಗ್ಯ ಸೇವೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಜನರು ಕೂಡ ಎಚ್ಚರಿಕೆ ವಹಿಸಬೇಕು.
ಶಮೀರ್, ನೆಲ್ಯಹುದಿಕೇರಿ (2020ರ ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿದವರು)
ಕೋವಿಡ್ ಕುರಿತು ಯಾವುದೇ ಆತಂಕ ಬೇಡ. ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುಂಜಾಗ್ರತಾ ವಹಿಸಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲೆಡೆ ಆಕ್ಸಿಜನ್ ಸರಬರಾಜು ಆಗುವ ಹಾಸಿಗೆಗಳು ಲಭ್ಯವಿವೆ. ಹಾಗಾಗಿ, ಸದ್ಯ ಯಾವುದೇ ಆತಂಕ, ಭೀತಿ ಪಡುವ ಅಗತ್ಯ ಇಲ್ಲ
ಡಾ.ಕೆ.ಎಂ.ಸತೀಶ್‌ಕುಮಾರ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕೋವಿಡ್ ಪ್ರಕರಣಗಳು ಒಂದು ವೇಳೆ ಕೊಡಗು ಜಿಲ್ಲೆಯಲ್ಲಿ ಕಂಡು ಬಂದರೂ ಯಾವುದೇ ಸಮಸ್ಯೆ ಇಲ್ಲ. ಎಲ್ಲ ಬಗೆಯ ಔಷಧಗಳು ಸೇರಿದಂತೆ ಸಕಲ ವ್ಯವಸ್ಥೆಗಳೂ ಜಿಲ್ಲೆಯಲ್ಲಿವೆ. ಆಕ್ಸಿಜನ್ ಪ್ಲಾಂಟ್‌ಗಳು, ಆಕ್ಸಿಜನ್ ಜನರೇಟರ್‌ಗಳು ಸೇರಿದಂತೆ ಎಲ್ಲ ಬಗೆಯ ಸಾಧನ ಸಲಕರಣೆಗಳಿವೆ. ಜನರು ಆತಂಕಪಡುವ ಅಗತ್ಯ ಇಲ್ಲ.
ಡಾ.ಲೋಕೇಶ್‌ಕುಮಾರ್, ಡೀನ್ ಮತ್ತು ನಿರ್ದೇಶಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ.